'ಕರ್ ನಾಟಕ ಸರ್ಕಾರ ಇಂದು ಕೊನೆಯಾಗುತ್ತಾ? ಮುಖ್ಯಮಂತ್ರಿಗೆ ಹೆಚ್ಚಾದ ಒತ್ತಡ

13 ತಿಂಗಳ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಇಂದು ಅಗ್ನಿ ಪರೀಕ್ಷೆ ಎದುರಾಗಿದೆ. ಏನೇ ಆಗಲೀ ಇಂದು ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನು ಕೊನೆಗೊಳಿಸುವುದಾಗಿ ಸ್ಪೀಕರ್ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: 13 ತಿಂಗಳ  ನಂತರ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಇಂದು ಅಗ್ನಿ ಪರೀಕ್ಷೆ ಎದುರಾಗಿದೆ. ಏನೇ ಆಗಲೀ ಇಂದು ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನು ಕೊನೆಗೊಳಿಸುವುದಾಗಿ ಸ್ಪೀಕರ್  ಹೇಳಿದ್ದು,ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸಲಿದ್ದಾರೆಯೇ ಅಥವಾ ಈ ಪ್ರಕ್ರಿಯೆಯನ್ನು ಇನ್ನೊಂದಿಷ್ಟು ದಿನಗಳ ಕಾಲ ಮುಂದುವರೆಸುತ್ತಾರಾ? ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಸರ್ಕಾರದ ಉಳಿವಿನ ಪ್ರಶ್ನೆ ಮಂಕಾಗಿದೆ.
ಕಳೆದ ವಾರವೇ ವಿಶ್ವಾಸಮತಯಾಚಿಸುವುದಾಗಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರಿಂದ ಪ್ರತಿಪಕ್ಷ ಬಿಜೆಪಿ ಸದನದಲ್ಲಿ ಹಾಜರಾಗಿತ್ತು. ಆದರೆ, ವಿಶ್ವಾಸಮತ ನಿರ್ಣಯ ಮೇಲಿನ ಚರ್ಚೆ ಹಿನ್ನೆಲೆಯಲ್ಲಿ ಮುಂದಡಲಾಗಿತ್ತು. ಇಂದು ಈ ಪ್ರಕ್ರಿಯೆಯನ್ನು ಅಂತ್ಯಗೊಳಿಸುವುದಾಗಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಮೈತ್ರಿ ಸರ್ಕಾರದ 15 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ ಬೆಂಬಲವನ್ನು ವಾಪಾಸ್ ಪಡೆದುಕೊಂಡಿದ್ದು, ಮುಂಬೈನಲ್ಲಿದ್ದಾರೆ.ರಾಜ್ಯಪಾಲರು ಎರಡೆರಡು ಬಾರಿ ನೀಡಿದ ಸೂಚನೆಯನ್ನು ಉಲ್ಲಂಘಿಸಲಾಗಿದ್ದು, ಮುಖ್ಯಮಂತ್ರಿ ಸರ್ಕಾರಕ್ಕೆ ತೊಂದರೆ ಎದುರಾಗುವ ಸಾಧ್ಯತೆಯೂ ಇದೆ.
ವರಿಷ್ಠರ ಮನವೊಲಿಕೆ ಹಿನ್ನೆಲೆಯಲ್ಲಿ ರಾಮಲಿಂಗಾರೆಡ್ಡಿ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಪ್ರಸ್ತುತದಲ್ಲಿ ಸಂಖ್ಯಾಬಲದಲ್ಲಿ ಬಿಜೆಪಿ ಹೆಚ್ಚಿನ ಸಂಖ್ಯೆ ಹೊಂದಿದೆ. ಮಾಯಾವತಿ ಸೂಚನೆ ಮೇರೆಗೆ ಬಿಎಸ್ಪಿ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಹೇಳಿದೆ. 
 ಈ ಮಧ್ಯೆ ಪಕ್ಷೇತರ ಶಾಸಕರಾದ ಆರ್. ಶಂಕರ್ ಹಾಗೂ ಎನ್ ನಾಗೇಶ್ ಸೇರಿದಂತೆ ಕಾಂಗ್ರೆಸ್, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದ್ದು, ಎಲ್ಲರ ಚಿತ್ರ ಸುಪ್ರೀಂಕೋರ್ಟ್ ನತ್ತ ನೆಟ್ಟಿದೆ.  ಸುಪ್ರೀಂಕೋರ್ಟ್ ನೀಡುವ ತೀರ್ಪು ತೀವ್ರ ಕುತೂಹಲ ಕೆರಳಿಸಿದ್ದು, ರಾಜ್ಯಪಾಲರು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. 
ಮುಂಬೈನಲ್ಲಿರುವ ಶಾಸಕರು ವಾಪಾಸ್ ಆಗಿ ವಿಶ್ವಾಸಮತ ಬೆಂಬಲಿಸುವಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಮತ್ತಿತರ ಹಲವು ನಾಯಕರು ಮನವಿ ಮಾಡಿಕೊಂಡಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ವಾಪಾಸ್ ಆಗುವುದಿಲ್ಲ ಎಂದು ಬಂಡಾಯ ಶಾಸಕರು ಸ್ಪಷ್ಟಪಡಿಸಿದ್ದು, ಮೈತ್ರಿ ಸರ್ಕಾರ ಅಸ್ತಿತ್ವ ಯಕ್ಷಪ್ರಶ್ನೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com