ವಿಶ್ವಾಸಮತ: ಕಾಲಮಿತಿ ನಿಗದಿಪಡಿಸುವಂತೆ ಸ್ಪೀಕರ್ ಗೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ಪಿಐಎಲ್

ರಾಜ್ಯ ರಾಜಕಾರಣದ ಬಿಕ್ಕಟ್ಟು ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯಪಾಲರ ನಿರಂತರ ಆದೇಶದ ನಂತರವೂ, ವಿಧಾನಸಭೆಯ ಸ್ಪೀಕರ್ ರಮೇಶ್....
ಹೈಕೋರ್ಟ್
ಹೈಕೋರ್ಟ್
ಬೆಂಗಳೂರು: ರಾಜ್ಯ ರಾಜಕಾರಣದ ಬಿಕ್ಕಟ್ಟು ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯಪಾಲರ ನಿರಂತರ ಆದೇಶದ ನಂತರವೂ, ವಿಧಾನಸಭೆಯ ಸ್ಪೀಕರ್ ರಮೇಶ್ ಕುಮಾರ್ ಅವರು ಅಲ್ಪಮತಕ್ಕೆ ಕುಸಿದಿರುವ ರಾಜ್ಯ ಸರ್ಕಾರಕ್ಕೆ ವಿಶ್ವಾಸಮತ ಯಾಚನೆಗೆ ಕಾಲಮಿತಿ ನಿಗದಿಪಡಿಸಿಲ್ಲ ಎಂದು ಆರೋಪಿಸಿ ವ್ಯಕ್ತಿಯೋರ್ವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಆಡಳಿತಾರೂಢ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷಕ್ಕೆ ವಿಶ್ವಾಸಮತ ಯಾಚನೆಗೆ ಕಾಲಮಿತಿ ನಿಗದಿಪಡಿಸುವಂತೆ ಸ್ಪೀಕರ್ ಗೆ ನಿರ್ದೇಶನ ನೀಡಬೇಕು ಹಾಗೂ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳ್ಳುವರೆಗೆ ಯಾವುದೇ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳದಂತೆ ಮುಖ್ಯಮಂತ್ರಿಗಳಿಗೆ ಸೂಚಿಸಬೇಕು ಎಂದು ಕೋರಿ ಆನಂದ ಮೂರ್ತಿ ಎಂಬ ವಕೀಲರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಧಾನಸಭೆಯ ಸ್ಪೀಕರ್ ಅನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.
ಈ ಅರ್ಜಿ ಮಂಗಳವಾರ ಅಥವಾ ಬುಧವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com