ಕರ್ನಾಟಕ ಸರ್ಕಾರ ಪತನ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆ: ಯಡಿಯೂರಪ್ಪಗೆ ಅಮಿತ್ ಶಾ ಬುಲಾವ್?

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ವಲಯದಲ್ಲಿ ಚಟುವಟಿಕೆ ಗರಿಗೆದರಿದೆ.

Published: 23rd July 2019 12:00 PM  |   Last Updated: 24th July 2019 01:28 AM   |  A+A-


Amit Shah Holds Consultations with BJP Leaders after Party Wins Trust Vote in Karnataka Assembly

ಕರ್ನಾಟಕ ಸರ್ಕಾರ ಪತನ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆ: ಯಡಿಯೂರಪ್ಪಗೆ ಅಮಿತ್ ಶಾ ಬುಲಾವ್?

Posted By : SBV SBV
Source : Online Desk
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ವಲಯದಲ್ಲಿ ಚಟುವಟಿಕೆ ಗರಿಗೆದರಿದೆ. 

ಸಿಎಂ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಸೋತು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ-ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಸಭೆ ನಡೆಸಿದ್ದಾರೆ. ಈ ನಡುವೆ ನಾಳೆ ದೆಹಲಿಗೆ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಅಮಿತ್ ಶಾ ಬುಲಾವ್ ನೀಡಿದ್ದಾರೆ. 

ಅಮಿತ್ ಶಾ- ಜೆಡಿ ನಡ್ಡಾ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವುದರ ಸಂಬಂಧ ಮಹತ್ವದ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ, ಸರ್ಕಾರ ರಚನೆ ಮಾಡುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ  ಯಡಿಯೂರಪ್ಪ, ಸರ್ಕಾರ ರಚನೆಗೂ ಮುನ್ನ ದೆಹಲಿ ಬಿಜೆಪಿ ನಾಯಕರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. 

ಕರ್ನಾಟಕದಲ್ಲಿ ಸತ್ಯ ಗೆದ್ದಿದೆ-ಪ್ರಕಾಶ್ ಜಾವ್ಡೇಕರ್ 

ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ  ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಟ್ವೀಟ್ ಮಾಡಿದ್ದು ಕರ್ನಾಟಕದಲ್ಲಿ ಸತ್ಯ ಗೆದ್ದಿದೆ ಎಂದು ಹೇಳಿದ್ದಾರೆ. 
Stay up to date on all the latest ರಾಜಕೀಯ news
Poll
Covid-19_vaccine1

ಕೋವಿಡ್-19 ಲಸಿಕೆ ಅಂತಿಮವಾಗಿ ನಮಗೆ ಸಹಜ ಸ್ಥಿತಿಗೆ ಬರಲು ಸಹಾಯ ಮಾಡುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp