'ಮೈತ್ರಿ'ಯಿಂದ ಒಡೆದ ಮನೆಯಾದ ಜೆಡಿಎಸ್: ಮಧ್ಯಂತರ ಚುನಾವಣೆಗೆ ಸಿದ್ದವಾಗಲು ವರಿಷ್ಠರ ಸೂಚನೆ

ಮಂಗಳವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಸೋತ ಬಳಿಕ ಬುಧವಾರ ಜೆಡಿಎಸ್ ಶಾಸಕರಾಂಗ ಪಕ್ಷದ ಸಭೆ ನಡೆಸಲಾಯಿತು. ಇದೇ ವೇಳೆ ಸಮ್ಮಿಶ್ರ ಸರ್ಕಾರ ...
ಜೆಡಿಎಲ್ ಪಿ ಸಭೆ
ಜೆಡಿಎಲ್ ಪಿ ಸಭೆ
ಬೆಂಗಳೂರು: ಮಂಗಳವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಸೋತ ಬಳಿಕ ಬುಧವಾರ ಜೆಡಿಎಸ್ ಶಾಸಕರಾಂಗ ಪಕ್ಷದ ಸಭೆ ನಡೆಸಲಾಯಿತು. ಇದೇ ವೇಳೆ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣಗಳೇನು ಎಂಬ ಬಗ್ಗೆ ವಿಮರ್ಶೆ ಮಾಡಲಾಯಿತು. 
ಮೈತ್ರಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಜತೆಗಿನ ಮೈತ್ರಿ ಮುಂದುವರಿಕೆ ಅಗತ್ಯವಿದೆಯೇ ಎಂಬ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆಯಿತು.
ಸದ್ಯದ ಸಂದಿಗ್ಧ ಮತ್ತು ಅಸ್ಥಿರ ರಾಜಕೀಯ ಸನ್ನಿವೇಶದಲ್ಲಿ ಮೈತ್ರಿಯ ಅಗತ್ಯ ಹೆಚ್ಚಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಏನು ತೀರ್ಮಾನ ಬೇಕಾದರೂ ತೆಗೆದುಕೊಳ್ಳಲಿ. ಪಕ್ಷದ ಕಡೆಯಿಂದ ಸದ್ಯಕ್ಕೆ ಯಾವುದೇ ಹೆಜ್ಜೆ ಮುಂದಿಡುವುದು ಬೇಡ ಎಂಬ ಅಭಿಪ್ರಾಯ ಕೇಳಿ ಬಂದಿತ್ತು.
ರಾಜೀನಾಮೆ ನೀಡಿರುವ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುವ ಸಂದರ್ಭ ಎದುರಾದರೆ ಆಗಿನ ಸನ್ನಿವೇಶ ನೋಡಿಕೊಂಡು ಮುಂದುವರಿಯುವುದು ಸೂಕ್ತ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ. 
ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿ ಆಮೀಷಕ್ಕೆ ಬಲಿಯಾಗಿರುವ ಎಚ್‌.ವಿಶ್ವನಾಥ್‌, ಕೆ.ಗೋಪಾಲಯ್ಯ ಮತ್ತು ನಾರಾಯಣಗೌಡರಿಗೆ ತಕ್ಕ ಪಾಠ ಕಲಿಸಲೇಬೇಕು ಎಂದು ಹೇಳಲಾಗಿದೆ.
ಜೆಡಿಎಸ್ ಪಕ್ಷ ಸಂಘಟನೆಗೋಸ್ಕರ  ರಾಜ್ಯಾದ್ಯಂತ ಪಾದಯಾತ್ರೆ ನಡೆಸುವುದಾಗಿ ಜೆಡಿಎಸ್ ಮುಖಂಡ ಎಚ್.ಡಿ ದೇವೇಗೌಡ ಹೇಳಿದ್ದಾರೆ. ಜೊತೆಗೆ ಜೆಡಿಎಸ್ ಸದಸ್ಯತ್ವ ಅಭಿಯಾನ ಆರಂಭಿಸುವುದಾಗಿ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಮೈಸೂರು ಮತ್ತು ನಂಜನಗೂಡಿನಿಂದ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com