ಬಿಎಸ್ ವೈ ಮುಖ್ಯಮಂತ್ರಿಯಾಗುತ್ತಿರುವುದು ನಮ್ಮ ಸೌಭಾಗ್ಯ: ಎಂಪಿ ರೇಣುಕಾಚಾರ್ಯ

ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋತಿತ್ತು, ನಾಲ್ಕು ದಿನಗಳ ನಂತರ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಬಿ.ಎಸ್ ಯಡಿಯೂರಪ್ಪ ..

Published: 26th July 2019 12:00 PM  |   Last Updated: 26th July 2019 02:31 AM   |  A+A-


Renukachaya And  BS Yedyurappa

ರೇಣುಕಾಚಾರ್ಯ ಮತ್ತು ಯಡಿಯೂರಪ್ಪ

Posted By : SD SD
Source : Online Desk
ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋತಿತ್ತು, ನಾಲ್ಕು ದಿನಗಳ ನಂತರ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಬಿ.ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ,  ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಿದ್ದಾರೆ. ಇದು ನಮ್ಮ ಸೌಭಾಗ್ಯ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ಬೆಂಗಳೂರಿನ ಬಿ.ಎಸ್.ವೈ ನಿವಾಸ ಡಾಲರ್ಸ್ ಕಾಲೋನಿಯ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡ್ತಿದ್ದಾರೆ ಇದು ನಾಡಿನ ಜನತೆಗೆ ಸಿಹಿ ಸುದ್ದಿಯಾಗಿದೆ. ಬಹುಮತ ಸಾಬೀತನ್ನು ರಾಜ್ಯಪಾಲರು ನಿಗದಿ ಮಾಡಲಿದ್ದಾರೆ. ನಮ್ಮ ಸಂಖ್ಯಾಬಲ ಹೆಚ್ಚಿದೆ. ಕಾನೂನಿನಡಿಯಲ್ಲಿ ಅತೃಪ್ತರ ರಾಜೀನಾಮೆ ಬಗೆಹರೆಯಲಿದೆ ಎಂದು ರೇಣುಕಾಚಾರ್ಯ ಹೇಳಿದರು.

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಈ ರಾಜ್ಯಕ್ಕೆ ಸುಭದ್ರ ಸರಕಾರ ಕೊಡುವುದು ನಮ್ಮ ಮೊದಲ ಆದ್ಯತೆ, ಮುಂಬೈನಲ್ಲಿರುವ ಶಾಸಕರು ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಶಾಸಕ ರೇಣುಕಾಚಾರ್ಯ ಇದೇ ವೇಳೆ ಹೇಳಿದ್ದಾರೆ. 
Stay up to date on all the latest ರಾಜಕೀಯ news
Poll
school

ರಾಷ್ಟ್ರೀಯ ಶಿಕ್ಷಣ ನೀತಿ-2020: 5 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಕಲಿಸುವ ಪ್ರಸ್ತಾಪವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp