ಸ್ಪೀಕರ್ ಅನರ್ಹತೆ ನಿರ್ಧಾರ ಪ್ರಶ್ನಿಸಿ ಮೂವರು ಅತೃಪ್ತ ಶಾಸಕರು 'ಸುಪ್ರೀಂ' ಮೊರೆ

ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಅತೃಪ್ತ ಶಾಸಕರಾದ ರಮೇಶ್ ಎಲ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಪಕ್ಷೇತರ ಶಾಸಕ...
ಸ್ಪೀಕರ್ ಕೆ ಆರ್ ರಮೇಶ್ ಕುಮಾರ್
ಸ್ಪೀಕರ್ ಕೆ ಆರ್ ರಮೇಶ್ ಕುಮಾರ್
ಬೆಂಗಳೂರು: ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಅತೃಪ್ತ ಶಾಸಕರಾದ ರಮೇಶ್ ಎಲ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಪಕ್ಷೇತರ ಶಾಸಕ ಆರ್ ಶಂಕರ್ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದಾರೆ. 
ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಕಳೆದ ಗುರುವಾರ ಇವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಮುಂದಿನ ಉಪ ಚುನಾವಣೆಯಲ್ಲಿ ಕೂಡ ಅವರು ಸ್ಪರ್ಧಿಸುವಂತಿಲ್ಲ ಎಂದು ನಿಷೇಧ ಹೇರಲಾಗಿದೆ.
ಸಂವಿಧಾನದ 10ನೇ ವಿಧಿಯ ಪ್ಯಾರಾ 2 (1) (ಎ)ಯಡಿ ಮತ್ತು 191(ಎ)ಯಡಿ 15ನೇ ರಾಜ್ಯ ವಿಧಾನಸಭೆಯ ಶಾಸಕ ಸ್ಥಾನದಿಂದ ಈ ಮೂವರನ್ನು ಸ್ಪೀಕರ್ ಅನರ್ಹಗೊಳಿಸಿದ್ದಾರೆ.
15ನೇ ವಿಧಾನಸಭೆಯ 5 ವರ್ಷಗಳ ಅವಧಿ ಮುಗಿಯುವವರೆಗೆ 2023ರವರೆಗೆ ಇವರನ್ನು ಸದಸ್ಯ ಸ್ಥಾನದಿಂದ ಸ್ಪೀಕರ್ ಅನರ್ಹಗೊಳಿಸಿದ್ದಾರೆ. 
ರಾಣೆಬೆನ್ನೂರು ಶಾಸಕ ಆರ್ ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಿಯಮದಡಿ ಸಂವಿಧಾನದ 10ನೇ ವಿಧಿಯಡಿ ಅನರ್ಹಗೊಳಿಸಲಾಗಿದೆ, ಅವರು ಉಪ ಚುನಾವಣೆಯಲ್ಲಿ ಕೂಡ ಸ್ಪರ್ಧಿಸುವಂತಿಲ್ಲ ಎಂದು ಸ್ಪೀಕರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com