ಅಸ್ಥಿರ ಸರ್ಕಾರ ರಚನೆಗಿಂತ ವಿಧಾನ ಸಭೆ ವಿಸರ್ಜಿಸಿ ಚುನಾವಣೆಗೆ ತೆರಳಿ: ವೈಎಸ್ ವಿ ದತ್ತಾ ಸಲಹೆ

ಅಸ್ಥಿರ ಸರ್ಕಾರ ರಚನಗಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರೆಳುವುದೇ ಹೆಚ್ಚು ಸೂಕ್ತ ಎಂದು ಜೆಡಿಎಸ್ ಮುಖಂಡ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್ ವಿ ದತ್ತಾ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಸಾಗರ: ಅಸ್ಥಿರ ಸರ್ಕಾರ ರಚನಗಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರೆಳುವುದೇ ಹೆಚ್ಚು ಸೂಕ್ತ ಎಂದು ಜೆಡಿಎಸ್ ಮುಖಂಡ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್ ವಿ ದತ್ತಾ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಥಿರ ಸರ್ಕಾರ ರಚನಗಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರೆಳುವುದೇ ಹೆಚ್ಚು ಸೂಕ್ತ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಾಲಕಾಲಕ್ಕೆ ಶಾಸಕರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರಗಳನ್ನು ಸೂಚಿಸದಿರುವುದೇ ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಕಾರಣವಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ನಾಯಕರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಶಾಸಕರು ಮುಂಬೈಗೆ ತೆರಳಿದಾಗ ಅವರನ್ನು ಪ್ರಳಯವಾದರೂ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲವೆಂದು ಸಿದ್ದರಾಮಯ್ಯ ಕಡ್ಡಿ ತುಂಡು ಮಾಡಿದಂತೆ ಸದನದಲ್ಲಿಯೇ ಘೋಷಣೆ ಮಾಡಿರುವುದು ಮೈತ್ರಿ ಸರ್ಕಾರಕ್ಕೆ ಮತ್ತಷ್ಟು ಮುಳುವಾಯಿತು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com