ಜುಲೈ 31ರಂದು ಸ್ಪೀಕರ್ ಆಯ್ಕೆಗೆ ಚುನಾವಣೆ, ಕೆಜಿ ಬೋಪಯ್ಯ ಆಯ್ಕೆ ಬಹುತೇಕ ಖಚಿತ

ವಿಧಾನಸಭೆಯ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಅವರು ಸೋಮವಾರ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಜುಲೈ 31ರಂದು ಚುನಾವಣೆ...
ಕೆಜಿ ಬೋಪಯ್ಯ
ಕೆಜಿ ಬೋಪಯ್ಯ
ಬೆಂಗಳೂರು: ವಿಧಾನಸಭೆಯ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಅವರು ಸೋಮವಾರ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಜುಲೈ 31ರಂದು ಚುನಾವಣೆ ನಿಗದಿಪಡಿಸಿ ರಾಜ್ಯಪಾಲ ವಜುವಾಯಿ ವಾಲಾ ಅವರು ಆದೇಶ ಹೊರಡಿಸಿದ್ದಾರೆ. ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.
ಬುಧವಾರ ಬೆಳಗ್ಗೆ 11 ಗಂಟೆಗೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ನಾಳೆ ಬೆಳಗ್ಗೆ 12 ಗಂಟೆಯವರೆಗೆ ವಿಧಾನಸಭಾ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಬಹುದು ಎಂದು ವಿಧಾನಸಭೆಯಲ್ಲಿ ಇಂದು ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಘೋಷಿಸಿದರು.
ಕೆ.ಆರ್.ರಮೇಶ್ ಕುಮಾರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಶ್ವಾಸಮತ ನಿರ್ಣಯ ಮಂಡಿಸಿ ಅದರಲ್ಲಿ ಯಶಸ್ಸು ಕಂಡ ಬಳಿಕ ರಮೇಶ್ ಕುಮಾರ್ ಸ್ಪೀಕರ್ ಸ್ಥಾನದಿಂದ ನಿರ್ಗಮಿಸಿದ್ದಾರೆ. ಮುಂದಿನ ಮೂರು ತಿಂಗಳಿಗೆ ಹಣಕಾಸು ಮಸೂದೆ ಮತ್ತು ಲೇಖಾನುದಾನ ಕೂಡ ಇದೇ ವೇಳೆ ಧ್ವನಿ ಮತದ ಮೂಲಕ ಅಂಗೀಕಾರಗೊಂಡಿದೆ.
ಉಪ ಸ್ಪೀಕರ್ ಕೃಷ್ಣಾ ರೆಡ್ಡಿ ಅವರು ರಾಜ್ಯಪಾಲರು ಕಳುಹಿಸಿದ್ದ ದಿನಾಂಕವನ್ನು ಸದನದಲ್ಲಿ ಪ್ರಕಟಿಸಿ ಕಲಾಪವನ್ನು ಜುಲೈ 31ಕ್ಕೆ ಮುಂದೂಡಿದರು.
ವಿಶ್ವಾಸಮತ ನಿರ್ಣಯ, ಹಣಕಾಸು ಮಸೂದೆ ಮತ್ತು ಲೇಖಾನುದಾನ ಇಂದು ವಿಧಾನಮಂಡಲದ ಉಭಯ ಸದನಗಳಲ್ಲೂ ಧ್ವನಿಮತದ ಮೂಲಕ ಅಂಗೀಕಾರ ಪಡೆದುಕೊಂಡಿದೆ.
ನೂತನ ಸ್ಪೀಕರ್ ಆಗಿ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com