ಎಚ್.ಡಿ ರೇವಣ್ಣ ಕನಸಿಗೆ ಕೊಳ್ಳಿ: ಕೆಎಂಎಫ್ ಅಧ್ಯಕ್ಷ ಚುನಾವಣೆ ಮುಂದೂಡಿದ ಮುಖ್ಯಮಂತ್ರಿ ಬಿಎಸ್‍ವೈ

ಹೇಗಾದರೂ ಮಾಡಿ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರಬೇಕೆಂಬ ಹೆಬ್ಬಯಕೆಯೊಂದಿಗೆ ನಾಲ್ವರು ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನು ಹೈಜಾಕ್ ಮಾಡಿ ತಮ್ಮತ್ತ ಸೆಳೆದುಕೊಂಡಿದ್ದ ಎಚ್ ಡಿ ರೇವಣ್ಣ ಅವರಿಗೆ...
ಎಚ್ ಡಿ ರೇವಣ್ಣ
ಎಚ್ ಡಿ ರೇವಣ್ಣ
ಬೆಂಗಳೂರು: ಹೇಗಾದರೂ ಮಾಡಿ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರಬೇಕೆಂಬ ಹೆಬ್ಬಯಕೆಯೊಂದಿಗೆ ನಾಲ್ವರು ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನು ಹೈಜಾಕ್ ಮಾಡಿ ತಮ್ಮತ್ತ ಸೆಳೆದುಕೊಂಡಿದ್ದ ಎಚ್ ಡಿ ರೇವಣ್ಣ ಅವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಾಕ್ ಕೊಟ್ಟಿದ್ದಾರೆ. 
ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಬೇಕಿತ್ತು. ಆದರೆ ಕೆಎಂಎಫ್ ಹಾಲಿ ಅಧ್ಯಕ್ಷ ನಾಗರಾಜ್ ಎಂಬುವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಚುನಾವಣೆ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದರು. ಈ ಸಂಬಂಧ ರಾಜ್ಯ ಸರ್ಕಾರ ಚುನಾವಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ. 
ಇನ್ನು ಕೆಎಂಎಫ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ನ ಪಾಲಾಗಬೇಕಿತ್ತು. ಮೈತ್ರಿ ಸರ್ಕಾರದ ವೇಳೆ ಕಾಂಗ್ರೆಸ್ ಶಾಸಕ ಭೀಮಾನಾಯಕ್ ಕೆಎಂಎಫ್ ಅಧ್ಯಕ್ಷರಾಗುವುದು ಅಂತಿಮವಾಗಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇತ್ತ ದೋಸ್ತಿ ನಾಯಕರ ಮೈತ್ರಿಗೆ ಕೊನೆಯ ಮೊಳೆ ಬಿದ್ದಿದೆ.
ಕೆಎಂಎಫ್ ಅಧ್ಯಕ್ಷ ಚುನಾವಣೆಯಲ್ಲಿ ಐವರು ಕಾಂಗ್ರೆಸ್ ಬೆಂಬಲಿತ, ಮೂವರು ಜೆಡಿಎಸ್, ಓರ್ವ ಬಿಜೆಪಿ ಹಾಗೂ ಮೂವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬೆಂಬಲಿತ ನಿರ್ದೇಶಕರಿದ್ದು ನಾಲ್ವರು ಸರ್ಕಾರದ ನಾಮನಿರ್ದೇಶಿತ ಸದಸ್ಯರಿದ್ದಾರೆ. ಸದ್ಯ ರೇವಣ್ಣ ಬಳಿ 7 ನಿರ್ದೇಶಕರಿದ್ದು ಐವರು ಮಾತ್ರ ಶಾಸಕ ಭೀಮಾನಾಯಕ್ ಬೆಂಬಲಕ್ಕೆ ನಿಂತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com