ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜಿನಾಮೆ

ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಶ್ವಾಸ ಮತ ಗೆದ್ದು, ಧನವಿನಿಯೋಗಕ್ಕೆ ಅಂಗೀಕಾರ ದೊರೆಯುತ್ತಿದ್ದಂತೆ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜಿನಾಮೆ ನೀಡಿದ್ದಾರೆ.
ರಮೇಶ್ ಕುಮಾರ್
ರಮೇಶ್ ಕುಮಾರ್
ಬೆಂಗಳೂರು: ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಶ್ವಾಸ ಮತ ಗೆದ್ದು, ಧನವಿನಿಯೋಗಕ್ಕೆ ಅಂಗೀಕಾರ ದೊರೆಯುತ್ತಿದ್ದಂತೆ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜಿನಾಮೆ ನೀಡಿದ್ದಾರೆ.
ವಿಧಾನಸಭೆಯಲ್ಲಿ 14 ತಿಂಗಳು 4 ದಿನ ನಾನು ಸಂವಿಧಾನಕ್ಕೆ ಚ್ಯುತಿ ಬರದಂತೆ ಕೆಲಸ ಮಾಡಿದ್ದೇನೆ ಎಂದು ಭಾವಿಸುತ್ತೇನೆ. ನನ್ನ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
ವಿಶ್ವಾಸಮತ ಪ್ರಕ್ರಿಯೆ ಮುಗಿಯುತ್ತಿದ್ದಂತೆ ರಮೇಶ್ ಕುಮಾರ್ ಅವರು ವಿದಾಯ ಭಾಷಣ ಮಾಡಿದರು. ಈ ದೇಶದಲ್ಲಿ ಭ್ರಷ್ಟಾಚಾರದ ಮೂಲ ಚುನಾವಣೆಗಳು. ಚುನಾವಣೆಗಳಲ್ಲಿ ಬದಲಾವಣೆ ಆಗದಿದ್ದರೆ, ಭ್ರಷ್ಟಾಚಾರ ನಿರ್ಮೂಲನೆ ಆಗುವುದಿಲ್ಲ. ಲೋಕಾಯುಕ್ತ ಕಾನೂನು ಸಹ ಸುಧಾರಣೆ ಆಗಬೇಕು ಎಂದರು.
ರಮೇಶ್ ಕುಮಾರ್ ಅವರು ತಮ್ಮ ರಾಜಿನಾಮೆ ಪತ್ರವನ್ನು ಉಪಸಭಾಧ್ಯಕ್ಷರು ಕೃಷ್ಣಾರೆಡ್ಡಿ ಅವರಿಗೆ ನೀಡಿ ಸದನದಿಂದ ನಿರ್ಗಮಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com