ಮೋದಿ ಸಂಪುಟ ರಚನೆಯನ್ನು ಹೊಗಳಿದ ಕಾಂಗ್ರೆಸ್ ಶಾಸಕ ರೋಷನ್ ಬೇಗ್‌

ಪಕ್ಷದ ನಾಯಕರ ವಿರುದ್ಧ ಟೀಕೆ ಮಾಡಿದ್ದರಿಂದ ಶಿಸ್ತು ಕ್ರಮದ ನೋಟಿಸ್ ಬಂದಿರುವ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ರೋಷನ್ ಬೇಗ್, ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಟೀಕೆ ಮಾಡಿದ್ದರಿಂದ ಶಿಸ್ತು ಕ್ರಮದ ನೋಟಿಸ್ ಬಂದಿರುವ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ರೋಷನ್ ಬೇಗ್, ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ.

ಕೇಂದ್ರ ಸಚಿವ ಸಂಪುಟ ರಚನೆಯ ಬಗ್ಗೆ ಹೊಗಳಿ ಟ್ವೀಟ್ ಮಾಡಿರುವ ರೋಷನ್ ಬೇಗ್, ರಾಜ್ಯಸಭಾ ಸದಸ್ಯರಾದ ಜೈಶಂಕರ್ ಮತ್ತು ಹರ್ದೀಪ್ ಸಿಂಗ್ ಪುರಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವುದನ್ನು ಶ್ಲಾಘಿಸಿದ್ದಾರೆ

ಸಂಪುಟದ ಎಲ್ಲಾ ಸದಸ್ಯರು ಉತ್ತಮವಾಗಿ ಕೆಲಸ ನಿರ್ವಹಿಸಲಿ ಎಂದು ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಬೇಗ್ ಟ್ವೀಟ್ ಮಾಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುವುದಾಗಿ ಚುನಾವಣೋತ್ತರ ಸಮೀಕ್ಷೆ ಪ್ರಕಟವಾದಾಗಲೇ ರೋಷನ್ ಬೇಗ್ ಪಕ್ಷದ ಅಧ್ಯಕ್ಷ ದಿನೇಶ್ ಗುಂಡೂರಾವ್,ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ವೇಣುಗೋಪಾಲ್ ಅವರನ್ನು 'ಬಫೂನ್' ಎಂದು ಕರೆದು ವ್ಯಂಗ್ಯವಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com