ಕುಮಾರಸ್ವಾಮಿ ಅವರು ಜೂನ್ 21 ರಿಂದ ಗ್ರಾಮ ವಾಸ್ತವ್ಯ ಆರಂಭಿಸುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಸಿಎಂ ಕುಮಾರಸ್ವಾಮಿ ಅವರು ಒಂದು ವರ್ಷದಿಂದ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ವಾಸ್ತವ್ಯ ಮಾಡುತ್ತಿದ್ದರು. ಅಲ್ಲಿ ಯಾವ ಜನಸಾಮಾನ್ಯರನ್ನೂ ಭೇಟಿ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆ ಬಗ್ಗೆ ನಾವು ಟೀಕಿಸಿದ್ದರೂ ತಲೆಕೆಡಿಸಿಕೊಂಡಿರಲಿಲ್ಲ ಎಂದು ಕಿಡಿಕಾರಿದ್ದರು. ಅಲ್ಲದೆ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಶ್ರೀರಾಮುಲು ಸೇರಿದಂತೆ ಹಲವು ಬಿಜೆಪಿ ನಾಯಕರು ಸಿಎಂ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಬಗ್ಗೆ ವ್ಯಂಗ್ಯವಾಡಿದ್ದರು.