ಲೋಕಸಭೆ ಚುನಾವಣೆ ಸೋಲು ಹಿನ್ನಲೆ: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್ ವಿಶ್ವನಾಥ್ ರಾಜಿನಾಮೆ

ಲೋಕಸಭಾ ಚುನಾವಣೆ 2019ರ ಹೀನಾಯ ಸೋಲಿನ ಬಳಿಕ ಜೆಡಿಎಸ್ ರಾಜ್ಯಾದ್ಯಕ್ಷ ಸ್ಥಾನಕ್ಕೆ ಹೆಚ್ ವಿಶ್ವನಾಥ್ ರಾಜಿನಾಮೆ ಸಲ್ಲಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಲೋಕಸಭಾ ಚುನಾವಣೆ 2019ರ ಹೀನಾಯ ಸೋಲಿನ ಬಳಿಕ ಜೆಡಿಎಸ್ ರಾಜ್ಯಾದ್ಯಕ್ಷ ಸ್ಥಾನಕ್ಕೆ ಹೆಚ್ ವಿಶ್ವನಾಥ್ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್ ಅವರು, ಲೋಕಸಭಾ ಚುನವಾಣೆ. ಸೋಲಿನ ನೈತಿಕ ಹೊಣೆ ಹೊತ್ತು ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಉತ್ತಮ ಪ್ರದರ್ಶನ ತೋರಲು ಜೆಡಿಎಸ್ ಪಕ್ಷ ವಿಫಲವಾದ ಹಿನ್ನೆಲೆಯಲ್ಲಿ, ಅದರ ನೈತಿಕ ಹೊಣೆಹೊತ್ತು ತಾವು ಈ ಹುದ್ದೆಯನ್ನು ತೊರೆಯುತ್ತಿರುವುದಾಗಿ ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವನಾಥ್ ಅವರು, 'ತುಮಕೂರಿನಲ್ಲಿ ವ್ಯವಸ್ಥಿತವಾಗಿ ಖೆಡ್ಡಾ ತೋಡಿ ದೇವೇಗೌಡರನ್ನು ಸೋಲಿಸಲಾಯಿತು. ಜೋಡೆತ್ತಿನಂತೆ ಇರಬೇಕಾದ ಮೈತ್ರಿ ಪಕ್ಷಗಳು ಆ ರೀತಿ ಇರಲೇ ಇಲ್ಲ. ದೇವೇಗೌಡರನ್ನು ಮೈಸೂರಿನಿಂದ ಸ್ಪರ್ಧಿಸುವಂತೆ ಕೋರಿದರು. ಅದು ಕಾಂಗ್ರೆಸ್​ ಷಡ್ಯಂತ್ರದಿಂದ ಸಾಧ್ಯವಾಗಲಿಲ್ಲ. ಮಂಡ್ಯದಲ್ಲೂ ಕಾಂಗ್ರೆಸ್ ನ ನಾಯಕರ ಕೊಂಕು ಮಾತುಗಳಿಂದ ಅಹಿಂದ ಮತಗಳು ಚದುರಿಹೋಗಿ, ಜೆಡಿಎಸ್ ​ಗೆ ಸೋಲು ಉಂಟು ಮಾಡಿತು. ಸಮನ್ವಯ ಸಮಿತಿ ಕೇವಲ ನಾಮಾಕಾವಸ್ಥೆಯಂತೆ ಇತ್ತು. ಇದು ಸಿದ್ದರಾಮಯ್ಯ ಅವರ ಕೈಗೊಂಬೆಯಾಗಿತ್ತೆ ಹೊರತು ಎರಡು ಪಕ್ಷಗಳ ಸಮನ್ವಯ ಸಾಧಿಸುವ ಕೆಲಸವನ್ನು ಮಾಡಲಿಲ್ಲ, ಇಲ್ಲಿ ನನಗಾಗಲಿ ಮತ್ತು ದಿನೇಶ್ ಗುಂಡೂರಾವ್ ಅವರಿಗೆ ಸ್ಥಾನ ನೀಡಲಿಲ್ಲ. ಈ ಎಲ್ಲ ಕಾರಣಗಳಿಂದ ನಾನು ಬೇಸತ್ತು ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com