
ಸಿದ್ದರಾಮಯ್ಯ
ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಆಗುವುದಿಲ್ಲ. ಮೊನ್ನೆ ನಡೆದ ಚುನಾವಣೆಯಲ್ಲಿ ರಾಜ್ಯದ ಮೀಸಲು ಕ್ಷೇತ್ರಗಳಲ್ಲಿ ಕೂಡಾ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು. ಹೀಗಿದ್ದರೂ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಒಬ್ಬ ದಲಿತ ಸಂಸದನಿಗೂ ಅವಕಾಶ ಸಿಕ್ಕಿಲ್ಲ. ಇದಕ್ಕಿಂತ ದೊಡ್ಡ ಅನ್ಯಾಯ, ದ್ರೋಹ ಬೇರೇನಿದೆ?
— Siddaramaiah (@siddaramaiah) June 4, 2019
ದಲಿತರ ಬಗ್ಗೆ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷ ಮತ್ತು ಅವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಪ್ರಾಮಾಣಿಕವಾದ ಕಾಳಜಿ ಮತ್ತು ಬದ್ಧತೆ ಇದ್ದರೆ ಮೊದಲು ರಾಷ್ಟ್ರಮಟ್ಟದಲ್ಲಿ ಎಸ್ಸಿಪಿ-ಟಿಎಸ್ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತರುವ ಧೈರ್ಯವನ್ನು ತೋರಿಸಲಿ. ಇದನ್ನು ಬೇಕಾದರೆ ಸವಾಲಾಗಿ ಸ್ವೀಕರಿಸಲಿ.
— Siddaramaiah (@siddaramaiah) June 4, 2019