ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಲಕ್ಷ್ಮಿ ಹೆಬ್ಬಾಳ್ಕರ್: ಸತೀಶ್ ಜಾರಕಿಹೊಳಿ -ಹೆಬ್ಬಾಳ್ಕರ್ ನಡುವೆ ಗುದ್ದಾಟ

ಹಲಗ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೂಮಿ ನೀಡಿದ ರೈತರ ಪರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಿಂತಿದ್ದು, ರೈತರು ಕಳೆದುಕೊಂಡ ಭೂಮಿಗೆ ಸೂಕ್ತ ಪರಿಹಾರವನ್ನು ...
ಲಕ್ಷ್ಮಿ ಹೆಬ್ಬಾಳ್ಕರ್ ಮತ್ತುಪ ಸತೀಶ್ ಜಾರಕಿಹೊಳಿ
ಲಕ್ಷ್ಮಿ ಹೆಬ್ಬಾಳ್ಕರ್ ಮತ್ತುಪ ಸತೀಶ್ ಜಾರಕಿಹೊಳಿ
ಬೆಳಗಾವಿ: ಹಲಗ  ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೂಮಿ ನೀಡಿದ ರೈತರ ಪರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಿಂತಿದ್ದು, ರೈತರು ಕಳೆದುಕೊಂಡ ಭೂಮಿಗೆ ಸೂಕ್ತ ಪರಿಹಾರವನ್ನು ಸರ್ಕಾರ ನೀಡಿಲ್ಲವೆಂದು ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. 
ನಿಗದಿ ಪಡಿಸಿದ್ದ ಪರಿಹಾರ ಹಣವನ್ನು ಕೊಡುವವರೆಗೂ ಯಾವುದೇ ಕಾರಣಕ್ಕೂ ಘಟಕ ಸ್ಥಾಪಿಸಲು ಬಿಡುವುದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಪಟ್ಟು ಹಿಡಿದಿದ್ದಾರೆ, ಆದರೆ ಸರ್ಕಾರ ತೆಗೆದುಕೊಂಡ ನಿರ್ದಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಖಡಕ್ ಸಂದೇಶ ನೀಡಿದ್ದಾರೆ.
ಜಮೀನಿಗೆ ಸೂಕ್ತ ಪರಿಹಾರ ನೀಡುವಂತೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ಕುರ್ಚಿಗಳನ್ನು ಮುರಿದು ಆಕ್ರೋಶ ಹೊರಹಾಕಿದ್ದಾರೆ. 
ಸತೀಶ್ ಇದು ಸತೀಶ್ ಜಾರಕಿಹೊಳಿ ಅವರನ್ನು ಕೆರಳಿಸಿದ್ದು, ಭೂಮಿ ಒತ್ತುವರಿ 2009 ರಲ್ಲಿಯೇ ಆಗಿದೆ. ಪರಿಹಾರವೂ ಆಗಲೇ ಬಿಡುಗಡೆ ಆಗಿದೆ. ಈ ವಿಷಯದಲ್ಲಿ ಡಿಸಿ ಅಸಾಹಯಕರು, 'ಸರ್ಕಾರದಿಂದ ಅನ್ಯಾಯವಾಗಿದ್ದರೆ ಸಹಿಸಿಕೊಳ್ಳಬೇಕಷ್ಟೆ' ಎಂದಿದ್ದಾರೆ.
ತಮ್ಮದೇ ಸರ್ಕಾರದ ವಿರುದ್ಧ ಹೆಬ್ಬಾಳ್ಕರ್ ಪ್ರತಿಭಟನೆ ಇದು ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಬೆಂಬಲಿಗರನ್ನು ಮತ್ತಷ್ಟು ಕೆರಳಿಸಿದ್ದು, ಸರ್ಕಾರವು ಭೂಮಿ ಕಳೆದುಕೊಂಡವರಿಗೆ ಕೇವಲ 3 ಲಕ್ಷ ಮಾತ್ರ ನೀಡುವುದಾದರೆ ನಾವು ಸರ್ಕಾರದ ವಿರುದ್ಧವೇ ಪ್ರತಿಭಟನೆ ಮಾಡುತ್ತೇವೆ ಎಂದು ಸವಾಲು ಹಾಕಿದ್ದಾರೆ. ಪ್ರತಿ ಎಕರೆ ಜಮೀನಿಗೆ 30 ಲಕ್ಷ ರು ಹಣ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com