ಕಾಂಗ್ರೆಸ್ ನಲ್ಲಿ ಹಿರಿಯರು, ಪ್ರಮಾಣಿಕರಿಗೆ ಬೆಲೆ ಇಲ್ಲ: ಮಾಜಿ ಸಚಿವ ತನ್ವೀರ್ ಸೇಠ್

ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರು ಮತ್ತು ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ ಎಂದ ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ರೋಷನ್ ಬೇಗ್...

Published: 05th June 2019 12:00 PM  |   Last Updated: 05th June 2019 06:15 AM   |  A+A-


Now, Tanveer Sait backs Ramalinga Reddy and Roshan baig

ತನ್ವೀರ್ ಸೇಠ್

Posted By : LSB LSB
Source : UNI
ಮೈಸೂರು: ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರು ಮತ್ತು ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ ಎಂದ ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ರೋಷನ್ ಬೇಗ್ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಹೇಳುವ ಮೂಲಕ ಮಾಜಿ ಸಚಿವ ತನ್ವೀರ್ ಸೇಠ್ ಪಕ್ಷದ ನಾಯಕರ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ನರಸಿಂಹರಾಜ ಕ್ಷೇತ್ರದ ಶಾಸಕರೂ ಆಗಿರುವ ತನ್ವೀರ್ ಸೇಠ್, ರಾಜ್ಯ ಕಾಂಗ್ರೆಸ್​ ನಾಯಕರ ಬಗ್ಗೆ ರಾಮಲಿಂಗಾ ರೆಡ್ಡಿ ಮತ್ತು ರೋಷನ್​ ಬೇಗ್​ ಸೇರಿದಂತೆ ಹಲವು ಹಿರಿಯರು ಅಸಮಾಧಾನ ಹೊರಹಾಕಿದ್ದಾರೆ. ಅವರ ಮಾತುಗಳಲ್ಲಿ ಸತ್ಯಾಂಶವಿದೆ. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರು ಮತ್ತು ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ ಎಂದು ಧ್ವನಿಗೂಡಿಸಿದ್ದಾರೆ.

ಸಚಿವ ಸ್ಥಾನದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ರಾಜಕಾರಣಿ, ಸನ್ಯಾಸಿ ಅಲ್ಲ. ಆಡಳಿತ ಪಕ್ಷದಲ್ಲಿದ್ದೇನೆ. ಮುಸ್ಲಿಂ ಸಮುದಾಯ ತಮ್ಮನ್ನು ಗೆಲ್ಲಿಸಿ ಕಳುಹಿಸಿದೆ. ಹೀಗಾಗಿ ಸಹಜವಾಗಿಯೇ ತಾವು ಸಹ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲಿಸಲು ಎರಡೂ ಪಕ್ಷಗಳ ನಾಯಕರಿಗೆ ಸಾಧ್ಯವಾಗಿಲ್ಲ. ಈ ತಪ್ಪುಗಳನ್ನು ಸರಿಪಡಿಸಿಕೊಂಡು ಪಕ್ಷ ಸಂಘಟನೆ ಮಾಡಬೇಕಾದ ಅಗತ್ಯವಿದೆ. ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಏಕೆಂದರೆ ಅವರು ನಮ್ಮ ಪಕ್ಷದವರಲ್ಲ ಎಂದರು.
Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp