ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಬೇಕಿತ್ತು- ಸುಮಲತಾ ಅಂಬರೀಶ್

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳದೆ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಬೇಕಾಗಿತ್ತು ಎಂದು ಮಂಡ್ಯ ಲೋಕಸಭಾ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಸುಮಲತಾ ಅಂಬರೀಶ್
ಸುಮಲತಾ ಅಂಬರೀಶ್
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳದೆ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಬೇಕಾಗಿತ್ತು ಎಂದು ಮಂಡ್ಯ ಲೋಕಸಭಾ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಹೀನಾಯ ಸೋಲು ಕಂಡಿದ್ದು, ಈ ಬಗ್ಗೆ ಉಭಯ ಪಕ್ಷಗಳ ನಾಯಕರು ಪರಸ್ಪರ ಕೆಸರೆರಾಟದಲ್ಲಿ ತೊಡಗಿರುವಾಗಲೇ ಸುಮಲತಾ ಈ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತಿತ್ತು. ಆದರೆ, ಮೈತ್ರಿಯಿಂದಾಗಿ ಕೇವಲ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.  ಕಾಂಗ್ರೆಸ್ - ಜೆಡಿಎಸ್ ಮೈತ್ರಿಕೂಟವನ್ನು ಮತದಾರರು  ಒಪ್ಪಿಕೊಂಡಿಲ್ಲ ಎಂದರು.
ಈ ವಿಚಾರವನ್ನು ತಾವು ಕಾಂಗ್ರೆಸ್ ನಾಯಕರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದೆ. ಒಂದು ವೇಳೆ ಏಕಾಂಗಿಯಾಗಿ ಸ್ಪರ್ಧೆ ಮಾಡದಿದ್ದರೆ ಕಾಂಗ್ರೆಸ್  ಪಕ್ಷಕ್ಕೆ ನಷ್ಟ ಎಂಬ ಮಾತನ್ನು ಹೇಳಿದ್ದೆ. ಆದರೆ, ಗೆಲ್ಲಬಹುದಾಗಿದ್ದ ಕ್ಷೇತ್ರಗಳನ್ನು ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟುಕೊಟ್ಟಿತು. ಕಾಂಗ್ರೆಸ್ ನಲ್ಲಿ ಒಳ್ಳೆಯ ಅಭ್ಯರ್ಥಿಗಳಿದ್ದರೂ ಸೀಟು ಬಿಟ್ಟು ಕೊಟ್ಟಿದ್ದರಿಂದ ಬಿಜೆಪಿಗೆ ಲಾಭವಾಯಿತು ಎಂದು ಅವರು ಅಭಿಪ್ರಾಯಪಟ್ಟರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com