ಮೈತ್ರಿ ಸರ್ಕಾರ ಸತ್ತಿದೆ, ಸಿಎಂ ಗ್ರಾಮ ವಾಸ್ಯವ್ಯ ಒಂದು ದೊಂಬರಾಟ: ಯಡಿಯೂರಪ್ಪ

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯ ಒಂದು ದೊಂಬರಾಟ ಅಥವಾ ಡ್ರಾಮಾ ಎಂದು ಮಾಜಿ ಸಿಎಂ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ....

Published: 06th June 2019 12:00 PM  |   Last Updated: 06th June 2019 10:16 AM   |  A+A-


Yeddyurappa

ಯಡಿಯೂರಪ್ಪ

Posted By : SD SD
Source : The New Indian Express
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯ ಒಂದು ದೊಂಬರಾಟ ಅಥವಾ ಡ್ರಾಮಾ ಎಂದು ಮಾಜಿ ಸಿಎಂ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಗೆದ್ದ 25 ಸಂಸದರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ, ಮೈತ್ರಿ ಸರ್ಕಾರ ಸತ್ತಿದೆ, ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ, ವಿಧಾನಸೌಧ ಖಾಲಿ ಹೊಡೆಯುತ್ತಿದೆ, ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದೆ,  ಇಷ್ಟು ದಿನ ಐಷಾರಾಮಿ ಹೋಟೆಲ್ ನಲ್ಲಿ ತಂಗುತ್ತಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಹಳ್ಳಿಗಳಿಗೆ ಏಕಾ ಏಕಿ ಭೇಟಿ ಮಾಡಲು ನಿರ್ಧರಿಸಿದ್ದಾರೆ, ಅದರ ಬದಲು ಬರ ಪ್ರದೇಶಗಳಿಗೆ ಪ್ರವಾಸ ಮಾಡಲಿ ಎಂದು ಸಲಹೆ ನೀಡಿದ್ದಾರೆ.

ಗೋವುಗಳಿಗೆ ಮೇವಿಲ್ಲ, ಆದರೆ ಕೇಂದ್ರ ಸಂಪುಟದಲ್ಲಿ ದಲಿತರಿಗೆ ಅವಕಾಶ ನೀಡಿಲ್ಲ ಎಂದು ಹೇಳುವ ಸಿದ್ದರಾಮಯ್ಯ ಪರಮೇಶ್ವರ್ ಅವರನ್ನು ಏಕೆ ಸಿಎಂ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಬಳ್ಳಾರಿಯಲ್ಲಿ ಜಿಂದಾಲ್ ಗೆ 3,227 ಎಕರೆ ಭೂಮಿ ನೀಡಿರುವುದನ್ನು ವಿರೋಧಿಸಿ, ಸತ್ಯಾಗ್ರಹ ಕೈಗೊಳ್ಳುವುದಾಗಿ ಹೇಳಿರುವ ಯಡಿಯೂರಪ್ಪ, ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. 
Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp