ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ: ಸುಮ್ಮನೆ ಕೂರಲ್ಲ: ದೇವೇಗೌಡ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಹೀನಾಯ ಸೋಲುಂಟಾಗಿದ್ದರ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾತನಾಡಿದ್ದು, ಸೋಲನ್ನು ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದ್ದಾರೆ.

Published: 07th June 2019 12:00 PM  |   Last Updated: 07th June 2019 05:41 AM   |  A+A-


Deve Gowda

ದೇವೇಗೌಡ

Posted By : SBV SBV
Source : Online Desk
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಹೀನಾಯ ಸೋಲುಂಟಾಗಿದ್ದರ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾತನಾಡಿದ್ದು, ಸೋಲನ್ನು ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದ್ದಾರೆ.
 
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದ ಜೆಡಿಎಸ್ ಅಭ್ಯರ್ಥಿಗಳಿಗೆ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಹೆಚ್ ಡಿ ದೇವೇಗೌಡ, ಲೋಕಸಭಾ ಚುನಾವಣೆ ಸೋಲಿನಿಂದ ಸುಮ್ಮನೆ ಕೂರುವುದಿಲ್ಲ, ಸೋಲನ್ನೇ ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದ್ದಾರೆ. 

ಮೈತ್ರಿ ಸರ್ಕಾರಕ್ಕೆ ಧಕ್ಕೆ ಉಂಟಾಗದಂತೆ ಜೆಡಿಎಸ್ ಪಕ್ಷವನ್ನು ಬೇರುಮಟ್ಟದಿಂದ ಸಂಘಟನೆ ಮಾಡಲಾಗುವುದು ಎಂದು ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ. ಪ್ರಾದೇಶಿಕ ಪಕ್ಷವ್ಬಾದ ಜೆಡಿಎಸ್ ನ್ನು ಕೊಲ್ಲುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಯಾರು ಪಕ್ಷ ತೊರೆದರೂ ಹೆದರುವುದುಲ್ಲ. ಯಾವುದೇ ಸಮುದಾಯದವರಾದರೂ ನಿಷ್ಠೆಯಿಂದ ಇರಿ, ಪಕ್ಷಕ್ಕೆ ಮೋಸ ಮಾಡಬೇಡಿ, ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಜವಾಬ್ದಾರಿ ನೀಡಲಾಗುವುದು ಎಂದು ದೇವೇಗೌಡ ಹೇಳಿದ್ದಾರೆ. 
Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp