ಆಂಧ್ರ ಸಿಎಂ ಜಗನ್ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ: ಭೇಟಿಯ ಅಸಲಿ ಕಾರಣವೇನು?

ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ...
ಜಗನ್ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
ಜಗನ್ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು:  ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್  ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. 
ಚಂದ್ರಬಾಬು ನಾಯ್ಡು ಅವರು ಜೆಡಿಎಸ್ ಪಕ್ಷದ ನಾಯಕರೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದಾರೆ. ಅಲ್ಲದೇ ಲೋಕಸಭಾ ಚುನಾವಣೆಯ ವೇಳೆ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರವಾಗಿ ನಾಯ್ಡು ಅವರು ಪ್ರಚಾರ ನಡೆಸಿದ್ದರು. ಅಲ್ಲದೇ ಜೆಡಿಎಸ್ ವರಿಷ್ಠರಾದ ಎಚ್‍ಡಿಡಿ ಅವರು ಚಂದ್ರಬಾಬು ನಾಯ್ಡು ಪರ ರಾಷ್ಟ್ರಮಟ್ಟದಲ್ಲಿ ಬೆಂಬಲಿಸಿದ್ದರು.
ಇನ್ನು ಕಳೆದ ವರ್ಷ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುವ ವೇಳೆ ಎಲ್ಲಾ ಪ್ರಾದೇಶಿಕ ಪಕ್ಷಗಳ ಮುಖಂಡರು ಹಾಜರಿದ್ದರು. ಜಗನ್ ಮಾತ್ರ ಗೈರಾಗಿದ್ದರು. ಹಾಗೆಯೇ ಇತ್ತೀಚೆಗೆ ಜಗನ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಕುಮಾರಸ್ವಾಮಿಯಾಗಲಿ ದೇವೇಗೌಡರಾಗಲಿ ಇರಲಿಲ್ಲ, ಆದೆರ ಏಕಾಏಕಿ ನಿಖಿಲ್ ಕುಮಾರಸ್ವಾಮಿ ಜಗನ್ ಭೇಟಿ ಮಾಡಿರುವುದು ಹಲವು ಊಹಾ ಪೋಹಗಳಿಗೆ ಕಾರಣವಾಗಿದೆ.
ಇತ್ತ ತಮ್ಮ ತಂದೆ, ಆಂಧ್ರಪ್ರದೇಶ ಮಾಜಿ ಸಿಎಂ ವೈಎಸ್ ರಾಜಶೇಜರ ರೆಡ್ಡಿ ಅವರನ್ನು ಕಳೆದುಕೊಂಡ ಬಳಿಕ ಕಾಂಗ್ರೆಸ್ ನಿಂದ ಬಂಡಾಯವಾಗಿ ಪಕ್ಷ ತೊರೆದಿದ್ದ ಯುವನಾಯಕ, ವೈ.ಎಸ್. ಜಗನ್ ಮೋಹನ್ ರೆಡ್ದಿ ಅವರು 10 ವರ್ಷಗಳ ಕಾಲ ರಾಜಕೀಯದಲ್ಲಿ ಪಕ್ಷವನ್ನು ಕಟ್ಟಲು ಪಾದಯಾತ್ರೆಗಳನ್ನು ಕೈಗೊಂಡಿದ್ದರು. ಆ ಮೂಲಕ ಜನರ ಮನ ಗೆದ್ದು ಬಹುಮತದೊಂದಿಗೆ ಅಧಿಕಾರ ಹಿಡಿದಿದ್ದರು.
ಸಿಎಂ ಜಗನ್ ಅವರನ್ನ ವಿಜಯವಾಡದಲ್ಲಿ ಭೇಟಿಯಾಗಿದ್ದ ನಿಖಿಲ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಫೋಟೋ ಹಂಚಿಕೊಂಡಿರುವ ನಿಖಿಲ್, ಜಗನ್ ಅವರಿಗೆ ಶುಭ ಕೋರಿದ್ದಾರೆ. ''ಅಂಧ್ರದಲ್ಲಿ 'ಜಗನ್ ಅಣ್ಣಾ' ಎಂದೇ ಜನಪ್ರಿಯರಾಗಿರುವ ಜಗನ್ ಮೋಹನ್ ರೆಡ್ಡಿಯವರ ರಾಜಕೀಯ ಜೀವನ, ರಾಜಕೀಯ ಕ್ಷೇತ್ರದಲ್ಲಿರುವ ಎಲ್ಲ ಯುವಕರಿಗೆ, ಕಾರ್ಯಕರ್ತರಿಗೆ ಪ್ರೇರಣೆ ನೀಡುವಂಥದ್ದು. ಹತ್ತು ವರ್ಷಗಳಿಗೂ ಹೆಚ್ಚು ಸುಧೀರ್ಘ ಕಾಲದ ಅವರ ಹೋರಾಟದ ದಾರಿ ಎಲ್ಲ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ''  ಅಲ್ಲದೇ ಹತ್ತು ವರ್ಷಗಳಿಗೂ ಹೆಚ್ಚು ಸುದೀರ್ಘ ಕಾಲದ ಅವರ ಹೋರಾಟದ ದಾರಿ ಎಲ್ಲ ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಕರ್ನಾಟಕದ ರಾಜಕಾರಣವನ್ನು ಕೂಡ ಚೆನ್ನಾಗಿ ತಿಳಿದಿದ್ದು, ಪ್ರಸಕ್ತ ರಾಜಕೀಯ ಸನ್ನಿವೇಶಗಳನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿದ್ದಾರೆ. ಸಾರ್ವಜನಿಕ ಜೀವನದಲ್ಲಿ, ಯಾವುದಕ್ಕೂ ಹಿಂಜರಿಯದೆ ಜನಸೇವೆಯೊಂದನ್ನೇ ಗುರಿಯಾಗಿಟ್ಟುಕೊಂಡು ಮುಂದುವರಿಯುವಂತೆ ನನಗೆ ಸಲಹೆ ನೀಡಿದರು ಎಂದು ನಿಖಿಲ್ ತಮ್ಮ ಪೋಸ್ಟ್ ನಲ್ಲಿ ಹೇಳಿಕೊಂಡಿದ್ದಾರೆ.
''ಜನರ ಸೇವೆಗಾಗಿ ಅವರ ಬದ್ದತೆ ಮತ್ತು ಎದುರಾದ ಎಲ್ಲ ಅಡೆತಡೆ, ಸೋಲು, ಸವಾಲುಗಳನ್ನು ಮೀರಿ, ಗುರಿಮುಟ್ಟುವವರೆಗೂ ವಿರಮಿಸದ ಅವರ ಛಲ, ದಿಟ್ಟತನ, ಹೋರಾಟಗಳಿಗೆ ಜನ ಆಶೀರ್ವಾದ ಮಾಡಿದ್ದಾರೆ. ಈ ಅವಕಾಶವನ್ನು ಅವರು ಸಂಪೂರ್ಣವಾಗಿ ಬಳಸಿಕೊಂಡು, ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾಗಿ ಅವರು, ಜನರ ನಿರೀಕ್ಷೆಗೆ ತಕ್ಕಂತೆ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ''  ಎಂದು ಶುಭ ಕೋರಿದ್ದಾರೆ.
ದೇಶದಲ್ಲಿ ಅದರಲ್ಲೂ ದಕ್ಷಿಣ ಭಾರತದಲ್ಲಿ ಯುವ ರಾಜಕಾರಣಿಗಳ ಆಗಮನವಾಗುತ್ತಿದೆ, ಸ್ಟಾಲಿನ್ ತಮ್ಮ ಪುತ್ರ ಉದಯನಿಧಿ ಅವರನ್ನು ರಾಜಕೀಯಕ್ಕೆ ಕರೆತಂದಿದ್ದಾರೆ, ಕೆ,ಸಿ ಚಂದ್ರಶೇಖರ್ ರಾವ್ ಕೂಡ ತಮ್ಮ ಮಗನನ್ನು ತಯಾರು ಮಾಡಿದ್ದಾರೆ. ಜಗನ್ ಯುವ ಮುಖ್ಯಮಂತ್ರಿಯಾಗಿದ್ದಾರೆ, ನಿಖಿಲ್ ಕೂಡ ಜನಪ್ರತಿನಿಧಿಯಾಗಲು ಬಯಸುತ್ತಿದ್ದಾರೆ. ಇದು ಮುಂದಿನ ದಿನಗಳಲ್ಲಿ ದಕ್ಷಿಣದಲ್ಲಿ ಯುವ ಪೀಳಿಗೆಯ ರಾಜಕಾರಣದ ಸಂಕೇತವಾಗಿದೆ ಎಂದು ಮೂಲಗಳು ತಿಳಿಸಿವೆ.
ವೈಎಸ್ ಆರ್ ಸಿಪಿ ಸಂಸದರೂ ಇದ್ದು, ಅವರು ಕೂಡ ಕಾಂಗ್ರೆಸ್ ಮೈತ್ರಿ ಪಕ್ಷದ ಜೊತೆ ಕೈ ಜೋಡಿಸಿದರೇ ಸಂಸತ್ ನಲ್ಲಿ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಸುಲಭವಾಗುತ್ತದೆ ಎಬುದಾಗಿ ಉನ್ನತ ಮೂಲಗಳ ಮಾಹಿತಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com