ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಮತ್ತೆ ಹೈಕಮಾಂಡ್ ಗೆ ದಿನೇಶ್ ಗುಂಡೂರಾವ್ ದೂರು

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ರೋಷನ್ ಬೇಗ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ಮಾಂಡ್ ಗೆ ಮತ್ತೊಂದು ದೂರು ನೀಡಿದ್ದಾರೆ.
ದಿನೇಶ್ ಗುಂಡೂರಾವ್ ಹಾಗೂ ರೋಷನ್ ಬೇಗ್
ದಿನೇಶ್ ಗುಂಡೂರಾವ್ ಹಾಗೂ ರೋಷನ್ ಬೇಗ್
ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ರೋಷನ್ ಬೇಗ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ಮಾಂಡ್ ಗೆ ಮತ್ತೊಂದು ದೂರು ನೀಡಿದ್ದಾರೆ.

ಐಎಂಎ ವಂಚನೆ ಪ್ರಕರಣ ಸಂಬಂಧ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ರೋಷನ್ ಬೇಗ್ ಆರೋಪ ಮಾಡಿದ್ದರು.ಪದೇ ಪದೇ ಮಾಧ್ಯಮಗಳ ಮುಂದೆ ಬಂದು ಸರ್ಕಾರ ಹಾಗೂ ಹಿರಿಯ ನಾಯಕರ ವಿರುದ್ಧ ಹೇಳಿಕೆ ನೀಡುವ ಮೂಲಕ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುವ ಕೆಲಸವನ್ನು ಅವರು ಮಾಡುತ್ತಿದ್ದರೆ.

ಇದರಿಂದಾಗಿ ವಿಪಕ್ಷ ಬಿಜೆಪಿಗೆ ಹೋರಾಟ ನಡೆಸಲು ಮತ್ತೊಂದು ಅಸ್ತ್ರ ಕೊಟ್ಟಂತಾಗಿದೆ.ಪ್ರಕರಣವನ್ನು ಈಗಾಗಲೇ ಸರ್ಕಾರ ತನಿಖೆ ನಡೆಸಲು ಎಸ್ಐಟಿ ರಚಿಸಿದೆ.ಆದರೆ ಸಿಬಿಐ ತನಿಖೆಗೆ ನೀಡಿ ಇದರಲ್ಲಿ ಕಾಂಗ್ರೆಸ್ ಪಕ್ಷದ ಸಚಿವರು,ಶಾಸಕರು ಭಾಗಿಯಾಗಿದ್ದಾರೆಂದು ಹೇಳುವ ಮೂಲಕ ಪಕ್ಷದ ಘನತೆಗೆ ಕುಂದು ತರುತ್ತಿದ್ದಾರೆ.

ಈಗಾಗಲೇ ಐಎಂಎ ವಂಚನೆ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದ್ದು ಈ ನಡುವೆ ರೋಷನ್ ಬೇಗ್ ಹೇಳಿಕೆಯಿಂದ ಮತ್ತಷ್ಟು ಗೊಂದಲ ಸೃಷ್ಠಿಯಾಗುತ್ತಿದೆ.ಹೈಕಮಾಂಡ್ ತಕ್ಷಣ ಮಧ್ಯ ಪ್ರವೇಶಿಸಿ ರೋಷನ್ ಬೇಗ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ ಇಲ್ಲದಿದ್ದಲ್ಲಿ ಪಕ್ಷ ಹಾಗೂ ಮೈತ್ರಿ ಸರ್ಕಾರದ ವರ್ಚಸ್ಸಿಗೆ ಮತ್ತಷ್ಟು ಹಾನಿ ಖಚಿತ ಎಂದು ಹೈಕಮಾಂಡ್ ಗೆ ನೀಡುರುವ ದೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com