ದಿಢೀರ್ ಬೆಳವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜಿನಾಮೆ?

ರಾಜ್ಯ ಕಾಂಗ್ರೆಸ್ ನಲ್ಲಿ ಉಂಟಾದ ದಿಢೀರ್ ಬೆಳವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ ...
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಉಂಟಾದ ದಿಢೀರ್ ಬೆಳವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ನೈತಿಕ ಹೊಣೆಹೊತ್ತು ದಿನೇಶ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ತಮ್ಮ ರಾಜಿನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರವಾನಿಸಿದ್ದಾರೆ ಎಂಬ ಸುದ್ದಿಗಳು ಕೇಳಿಬರುತ್ತಿವೆ. ಆದರೆ ಅಧಿಕೃತ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
ಕಳೆದ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಜಿ. ಪರಮೇಶ್ವರ್ ಅವರಿಂದ ತೆರವಾದ ಕೆಪಿಸಿಸಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ  2018 ಜುಲೈ 4 ರಂದು ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.
ಇತ್ತೀಚೆಗೆ ಕಾಂಗ್ರೆಸ್ ಪಕ್ಷದಲ್ಲಿ ಆಗುತ್ತಿರುವ ದಿಢೀರ್ ಬೆಳವಣೆಗೆಯಿಂದ ಬೇಸರಗೊಂಡಿದ್ದರು. ಇತ್ತೀಚೆಗೆ ಶಾಸಕ ರೋಷನ್ ಬೇಗ್ ದಿನೇಶ್ ಗುಂಡೂರಾವ್ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ದಿನೇಶ್ ರಾಜಿನಾಮೆ ಬಗ್ಗೆ ಇದುವರೆಗೂ ಯಾವುದೇ ಕಾಂಗ್ರೆಸ್ ನಾಯಕರು ಸ್ಪಷ್ಟನೆ ನೀಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com