ಬಿಜೆಪಿ ನಾಯಕ ಎ.ಮಂಜು ಸ್ಫೋಟಕ ಆರೋಪ: ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆಸ್ತಿ ವಿವರಗಳನ್ನು ಬಚ್ಚಿಟ್ಟು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿರುವ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಬಗ್ಗೆ ಸಮಗ್ರ ...
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ
ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆಸ್ತಿ ವಿವರಗಳನ್ನು ಬಚ್ಚಿಟ್ಟು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿರುವ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ಶುಕ್ರವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದೇನೆ. ಹೀಗಾಗಿ ಪ್ರಜ್ವಲ್‌ ರೇವಣ್ಣಗೆ ಸಂಸದರಾಗಿ ಪ್ರಮಾಣ ವಚನ ಬೋಧಿಸಬಾರದು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎ.ಮಂಜು ಆಗ್ರಹಿಸಿದ್ದಾರೆ. 
ಚುನಾವಣೆ ಸಂದರ್ಭದಲ್ಲಿ ಅಫಿಡವಿಟ್‍ನಲ್ಲಿ ಸುಳ್ಳು ಮಾಹಿತಿ ಉಲ್ಲೇಖ ಮಾಡಿದ್ದು, ಬ್ಯಾಂಕ್ ಬ್ಯಾಲೆನ್ಸ್ ಬಗ್ಗೆ ಮಾಹಿತಿ ಸರಿಯಾಗಿ ನೀಡಿಲ್ಲ. ಅಫಿಡವಿಟ್‍ನಲ್ಲಿ ಬ್ಯಾಂಕ್ ಬ್ಯಾಲೆನ್ಸ್ 5.ಲಕ್ಷ ಎಂದು ತೋರಿಸಿದ್ದಾರೆ. ಆದರೆ ಮಾರ್ಚ್ 22 ರವರೆಗೆ 50 ಲಕ್ಷ ರು ಹಣ ಇತ್ತು. ಪಡುವಲಹಿಪ್ಪೆಯ ಕರ್ನಾಟಕ ಬ್ಯಾಂಕ್‍ನಲ್ಲಿ ಪ್ರಜ್ವಲ್ ಬ್ಯಾಂಕ್ ಬ್ಯಾಲೆನ್ಸ್ 5 ಲಕ್ಷ. ರೂ. ಎಂದು ಉಲ್ಲೇಖವಾಗಿದೆಎಂದು ಆರೋಪ ಮಾಡಿದ್ದಾರೆ.
43 ಲಕ್ಷ ಬಿಟ್ಟು ಕೇವಲ 5 ಲಕ್ಷ ತೋರಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದರೆ 5 ವರ್ಷ ಆದಾಯ ತೆರಿಗೆ ತೋರಿಸಬೇಕು. ಆದರೆ ಕೇವಲ ಒಂದು ವರ್ಷ ಆದಾಯ ತೆರಿಗೆ ತೋರಿಸಿದ್ದಾರೆ. ಉಳಿದೆಲ್ಲವೂ ನಾಟ್ ಫೈಲ್ ಎಂದು ತೋರಿಸಿದ್ದಾರೆ. 2016 ರಲ್ಲಿಯೇ ಮಿನರ್ವ್ ಸರ್ಕಲ್ ನಲ್ಲಿ ಅಕೌಂಟ್ ಓಪನ್ ಮಾಡಿದ್ದಾರೆ. ಆಗಲೇ ಹಲವು ಕಡೆ ಭೂಮಿಯನ್ನೂ ಖರೀದಿಸಿದ್ದರು. ಹೀಗಿದ್ದರೂ ಎಲ್ಲವನ್ನೂ ಮರೆಮಾಚಿದ್ದಾರೆ ಎಂದು ಮಂಜು ದೂರಿದ್ದಾರೆ.
ಹೊಳೆನರಸೀಪುರದಲ್ಲಿ ತಂದೆ ಸೂರಜ್ ಮತ್ತು ಪ್ರಜ್ವಲ್ ಅವರಿಗೆ ಗಿಫ್ಟ್ ಕೊಟ್ಟಿದ್ದಾರೆ. ಆ ಗಿಫ್ಟ್ ನಿವೇಶನ ಅಂತ ಅಫಿಡವಿಟ್‍ನಲ್ಲಿ ತೋರಿಸಿದ್ದಾರೆ. ಆದರೆ ವಾಸ್ತವವಾಗಿ ಅದು ಕನ್ವೆನ್ಷನ್ ಹಾಲ್ ಆಗಿದೆ. ಚೆನ್ನಾಂಬಿಕಾ ಕನ್ವೆನ್ಷನ್ ಹಾಲ್ ಅಂತ ರಾಷ್ಟ್ರೀಯ ಹೆದ್ದಾರಿಯಲ್ಲಿದೆ. ಹೈವೇಯಲ್ಲಿ ಕಟ್ಟಿರುವುದರಿಂದ ದೂರು ಕೂಡ ನೀಡಲಾಗಿತ್ತು. ಸುಮಾರು ಐದಾರು ಕೋಟಿಯ ಬೆಲೆ ಬಾಳುವ ಕನ್ವೆನ್ಷನ್ ಹಾಲ್ ಇದಾಗಿದ್ದು, ಕೋರ್ಟ್ ಕೂಡ ಡೆಮಾಲಿಶನ್‍ಗೆ ಆದೇಶಿಸಿತ್ತು. ಹೀಗಿದ್ದರೂ ಅಧಿಕಾರ ದುರುಪಯೋಗ ಮಾಡಿ ಇಲ್ಲಿಯವರೆಗೆ ಉಳಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಅವರ ಖಾತೆಗೆ ಸುಮಾರು 10 ಕೋಟಿಗೂ ಹೆಚ್ಚು ಹಣ ಹರಿದು ಬಂದಿದೆ. ಹಲವು ಕಡೆ ಭೂಮಿ ಖರೀದಿಸಿ ಬ್ಯಾಂಕ್‌ನಿಂದಲೇ ಹಣ ಪಾವತಿಸಿರುವ ದಾಖಲೆಗಳು ಇವೆ. ಪ್ರಜ್ವಲ್‌ ಅವರು ಪಿಯುಸಿ ಓದುತ್ತಿರುವಾಗಲೇ 3 ಕೋಟಿ ರೂ. ಮೌಲ್ಯದ ಆಸ್ತಿ ಖರೀದಿಸಿದ್ದ ದಾಖಲೆಯೂ ಇದೆ. ಈ ಅಂಶಗಳನ್ನು ಮರೆಮಾಚಿದ್ದು ಏಕೆ,'' ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com