'ನಿರ್ಧಾರದಿಂದ ಹಿಂದೆ ಸರಿಯಲ್ಲ, ರಾಜೀನಾಮೆ ಪತ್ರ ದೇವೇಗೌಡರ ಮುಂದಿದೆ, ಅವರ ತೀರ್ಮಾನಕ್ಕೆ ನಾನು ಬದ್ಧ'

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಂಸತ್ತಿನಲ್ಲಿ ಇರಬೇಕೆಂಬುದು ರಾಜ್ಯದ ಹಾಗೂ ನನ್ನ ಆಶಯ.ಚುನಾವಣೆ ಫಲಿತಾಂಶ ಬಂದ ದಿನವೇ ನನ್ನ ರಾಜೀನಾಮೆಯನ್ನು ಅವರ ಮುಂದಿಟ್ಟಿದ್ದೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ
ನವದೆಹಲಿ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಂಸತ್ತಿನಲ್ಲಿ ಇರಬೇಕೆಂಬುದು ರಾಜ್ಯದ ಹಾಗೂ ನನ್ನ ಆಶಯ.ಚುನಾವಣೆ ಫಲಿತಾಂಶ ಬಂದ ದಿನವೇ ನನ್ನ ರಾಜೀನಾಮೆಯನ್ನು ಅವರ ಮುಂದಿಟ್ಟಿದ್ದೆ. ಅವರು ಯಾವಾಗ ಬೇಕಾದರು ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಸಂಸತ್ ಅಧಿವೇಶನಕ್ಕೆ ಗೈರಾಗಿದ್ದೆ. ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದರಿಂದ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ.
ಇಂದು ಪ್ರಮಾಣವಚನ ಸ್ವೀಕರಿಸಿದ್ದೇನೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ನನಗೆ ಪೈಪೋಟಿ ಇರಲಿಲ್ಲ. ಕ್ಷೇತ್ರದಲ್ಲಿ ಬಹಳ ಅಭಿವೃದ್ಧಿ ಕೆಲಸ ಮಾಡಿದ್ದರಿಂದ ನನಗೆ ಗೆಲುವು ಸಾಧ್ಯವಾಯಿತು ಎಂದು ಲೋಕಸಭಾ ಚುನಾವಣಾ ಗೆಲುವಿನ ರಹಸ್ಯವನ್ನು ಬಿಚ್ಚಿಟ್ಟರು,
ಪ್ರಜ್ವಲ್‌ ಪ್ರಮಾಣವಚನಕ್ಕೆ ತಂದೆ, ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ, ತಾಯಿ ಭವಾನಿ ರೇವಣ್ಣ, ಸಹೋದರ ಡಾ.ಸೂರಜ್‌ ರೇವಣ್ಣ ಸಾಕ್ಷಿಯಾದರು. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಹುಟ್ಟಿದ ಹರದನಹಳ್ಳಿಯಲ್ಲಿ ಈಶ್ವರ ದೇವಾಲಯ ಇದೆ, ಈ ದೇವರು ದೇವೇಗೌಡರ ಕುಟುಂಬದ ಮನೆ ದೇವರಾಗಿದೆ. ಹೀಗಾಗಿ ಪ್ರಜ್ವಲ್‌ ಮನೆ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com