ಸಿಎಂ ಗ್ರಾಮವಾಸ್ತವ್ಯದ ವಿರುದ್ಧ ಬಿಜೆಪಿ ಪಾದಯಾತ್ರೆ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯದ ವಿರುದ್ಧ ಬಿಜೆಪಿ ಪಾದಯಾತ್ರೆ ಕೈಗೊಂಡಿದ್ದು, ಇದು ಗ್ರಾಮ ವಾಸ್ತವ್ಯ ಅಲ್ಲ ಡ್ರಾಮಾ....

Published: 24th June 2019 12:00 PM  |   Last Updated: 24th June 2019 06:21 AM   |  A+A-


BJP launches Padayatra against Kumaraswamy's 'Village Stay' at Karegudda in Raichur Dist on June 26

ಸಾಂದರ್ಭಿಕ ಚಿತ್ರ

Posted By : LSB
Source : UNI
ರಾಯಚೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯದ ವಿರುದ್ಧ ಬಿಜೆಪಿ ಪಾದಯಾತ್ರೆ ಕೈಗೊಂಡಿದ್ದು, ಇದು ಗ್ರಾಮ ವಾಸ್ತವ್ಯ ಅಲ್ಲ ಡ್ರಾಮಾ ವಾಸ್ತವ್ಯ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಸಿಎಂ ಕುಮಾರಸ್ವಾಮಿ ಅವರು ಯಾದಗಿರಿ ಜಿಲ್ಲೆಯ ಚಂಡರಿ ನಂತರ ಜೂನ್ 26ರಂದು ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಕರೇಗುಡ್ಡದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು,  ಇದಕ್ಕೆ ಟಾಂಗ್ ಕೊಡಲು ದೇವದುರ್ಗ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಅವರು ಅದೇ ಕರೇಗುಡ್ಡಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ.

ದೇವದುರ್ಗಾ ತಾಲೂಕಿನ ಗೂಗಲ್ ಗ್ರಾಮದಿಂದ ಶಿವನಗೌಡ ನಾಯಕ ನೇತೃತ್ವದಲ್ಲಿ 25 ಸಾವಿರ ಬಿಜೆಪಿ ಕಾರ್ಯಕರ್ತರು ಇಂದು ಪಾದಯಾತ್ರೆ ಕೈಗಂಡಿದ್ದಾರೆ.

ಈ ವೇಳೆ ಮಾತನಾಡಿದ ಶಿವನಗೌಡ ನಾಯಕ್ ಅವರು, ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ರಾಜಕೀಯ ಗಿಮಿಕ್ ಆಗಿದ್ದು, ರಾಯಚೂರು ಜಿಲ್ಲೆಯ ಸಮಸ್ಯೆಗಳಿಗೆ ಅವರು ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.

ರೈತರ ಸಾಲ ಮನ್ನಾ ಯೋಜನೆ ಜಾರಿಯಾಗದೆ ಜಿಲ್ಲೆಯಲ್ಲಿ ಹಲವು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಯತ್ನಿಸುತ್ತಿಲ್ಲ ಎಂದು ದೂರಿದರು.


Stay up to date on all the latest ರಾಜಕೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp