ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆ ಇಲ್ಲ- ಸಿದ್ದರಾಮಯ್ಯ

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆ ಇಲ್ಲ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮೈಸೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವ  ಸಾಧ್ಯತೆ ಇಲ್ಲ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ  ಇಂದು ಹೇಳಿದ್ದಾರೆ. 
 ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆ ಇದೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಎಚ್ಚರಿಕೆಯ ಸಂದೇಶ ನೀಡಿದ ನಂತರ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಅಂತಹ ಯಾವುದೇ ಚುನಾವಣೆ ರಾಜ್ಯದಲ್ಲಿ ಎದುರಾಗುವುದಿಲ್ಲ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. 
ಸಮ್ಮಿಶ್ರ ಸರ್ಕಾರದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತಂತೆ ಶುಕ್ರವಾರ ಪ್ರತಿಕ್ರಿಯಿಸಿದ್ದ ದೇವೇಗೌಡ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ ಬಗ್ಗೆ ಮಾತನಾಡಿದ್ದರು. ಆದರೆ, ನಂತರ ನಗರಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈ ರೀತಿ ಹೇಳಿಕೆ ನೀಡಿದ್ದೆ ಎಂದು ಸಮಜಾಯಿಸಿ ನೀಡಿದ್ದರು.  
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಕನಸು ಕಾಣುತ್ತಿದ್ದಾರೆ. ಆದರೆ, ಅವರ ಕನಸಿಗೆ ಯಾರೊಬ್ಬರು ಪ್ರತಿಕ್ರಿಯಿಸುತ್ತಿಲ್ಲ. ಯಡಿಯೂರಪ್ಪ ಹೇಳುವುದು ಯಾವುದೂ ಕೂಡಾ ಸತ್ಯವಾಗಿಲ್ಲ ಎಂದರು.
ಹಳೆಯ, ಹಿರಿಯ, ಹೊಸ, ಯುವ ನಾಯಕರನ್ನೊಳಗೊಂಡ ಹೊಸ  ಪದಾಧಿಕಾರಿಗಳನ್ನು ನೇಮಿಸಿಕೊಳ್ಳುವ ಮೂಲಕ ಪಕ್ಷ ಸಂಘಟಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ವಜಾಗೊಳಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com