ಬಿಜೆಪಿ ಪ್ರಾಯೋಜಿತ ಗುಂಪುಗಳಿಂದ ಗ್ರಾಮ ವಾಸ್ತವ್ಯಕ್ಕೆ ಅಡ್ಡಿ- ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

ಬಿಜೆಪಿ ಪ್ರಾಯೋಜಿತ ಗುಂಪುಗಳಿಂದ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಅಡ್ಡಿಯುಂಟು ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ರಾಯಚೂರು: ಬಿಜೆಪಿ ಪ್ರಾಯೋಜಿತ ಗುಂಪುಗಳಿಂದ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಅಡ್ಡಿಯುಂಟು ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇಂತಹ ಪ್ರಯತ್ನಗಳಿಂದ ನನ್ನ ಸ್ಥೈರ್ಯ ಕುಂದದು; ಜನರೊಂದಿಗೆ ಬೆರೆಯುವ, ಅರಿತುಕೊಳ್ಳುವ, ಸ್ಪಂದಿಸುವ ನನ್ನ ಕಾಯಕ ಹೀಗೆ ಮುಂದುವರಿಯುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಜಿಲ್ಲೆಯ ಕರೇಗುಡ್ಡ ಗ್ರಾಮಕ್ಕೆ ಬಸ್ಸಿನಲ್ಲಿ ಗ್ರಾಮ ವಾಸ್ತವ್ಯ ಮಾಡಲು ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೋಗುತ್ತಿದ್ದ ವೇಳೆ  ದಾರಿಯಲ್ಲಿ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದರಿಂದ ಅವರ ಮೇಲೆ ಸಿಎಂ ಸಿಟ್ಟಿನಿಂದ ರೊಚ್ಚಿಗೆದಿದ್ದರು. 
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು,ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಕೂಗಾಡಿದ್ದರು. 
ಇದಕ್ಕೆ ಪ್ರತಿಪಕ್ಷ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ನಂತರ ಈ ಘಟನೆಗೆ ಬಗ್ಗೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ, ಬಿಜೆಪಿ  ಪ್ರಾಯೋಜಿತ ಗುಂಪುಗಳಿಂದ ಗ್ರಾಮ ವಾಸ್ತವ್ಯಕ್ಕೆ ಅಡ್ಡಿಯನ್ನುಂಟು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com