ಜೆಡಿಎಸ್ ನಂಬಿಕೆಗೆ ಅರ್ಹವಲ್ಲ: ಕಾಂಗ್ರೆಸ್ ಆತ್ಮಾವಲೋಕನ ಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳ ಅಳಲು!

2019ರ ಲೋಕಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಜೊತೆ ಕೆ.ಸಿ.ವೇಣುಗೋಪಾಲ್ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ 21 ...
ಕಾಂಗ್ರೆಸ್ ಸಭೆಯಲ್ಲಿ ಹಿರಿಯ ನಾಯಕರು
ಕಾಂಗ್ರೆಸ್ ಸಭೆಯಲ್ಲಿ ಹಿರಿಯ ನಾಯಕರು
ಬೆಂಗಳೂರು: 2019ರ ಲೋಕಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಜೊತೆ ಕೆ.ಸಿ.ವೇಣುಗೋಪಾಲ್ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ 21 ಕ್ಷೇತ್ರಗಳ ಸೋತ ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಅವರು ಸಭೆಯಲ್ಲಿ ಭಾಗವಹಿಸಿದ್ದರು. 
ಸಂಘಟನೆಗೆ 3 ವಾರದೊಳಗೆ ಹೊಸ ಸ್ವರೂಪ ಕೊಡುವ ನಿರ್ಧಾರಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಕೆಪಿಸಿಸಿ ಬಂದಿದೆ. ಜತೆಗೆ ಇದೇ ಮೊದಲ ಬಾರಿಗೆ ಪಂಚಾಯಿತಿ ಮಟ್ಟದ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. 
ಲೋಕಸಭೆ ಚುನಾವಣೆ ಸೋಲಿನ ಪರಾಮರ್ಶೆಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನೇತೃತ್ವದಲ್ಲಿ ಬುಧವಾರ ನಡೆದ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಈ ನಿಲುವು ತೆಗೆದುಕೊಳ್ಳಲಾಗಿದೆ. 
ಅದರಂತೆ ಬೂತ್‌ ಹಂತದಿಂದ ರಾಜ್ಯ ಮಟ್ಟದ ವರೆಗೆ ಪಕ್ಷದ ಪದಾಧಿಕಾರಿಗಳ ಪಟ್ಟಿಯಲ್ಲಿ ಆಮೂಲಾಗ್ರ ಬದಲಾವಣೆಯಾಗಲಿದೆ. ಸಂಘಟನೆಗೆ ಶಕ್ತಿ ತುಂಬಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 
ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಯನ್ನು ಎಐಸಿಸಿ ಈಗಾಗಲೇ ವಿಸರ್ಜಿಸಿದೆ. ಇನ್ನು 3 ವಾರದೊಳಗೆ ಹೊಸ ಪದಾಧಿಕಾರಿಗಳ ನಿಯೋಜನೆಯಾಗಲಿದೆ. ಈ ಸಂಬಂಧ ಕಟ್ಟುನಿಟ್ಟಿನ ಮಾನದಂಡ ಅಳವಡಿಸಿಕೊಳ್ಳಲಾಗುವುದು. ಮೆರಿಟ್‌ ಆಧಾರದಲ್ಲಿ ಪದಾಧಿಕಾರಿಗಳನ್ನು ನೇಮಿಸಲಾಗುವುದು ಎಂದು ತಿಳಿದು ಬಂದಿದೆ. 
ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಚಿವರಾದ ಡಿ.ಕೆ.ಶಿವಕುಮಾರ್‌, ಎಂ.ಬಿ.ಪಾಟೀಲ್‌ ಸೇರಿದಂತೆ ಹಿರಿಯ ಮುಖಂಡರು ಸಭೆಯಲ್ಲಿದ್ದರು. 
ಜೆಡಿಎಸ್‌ ನಂಬಿಕೊಂಡು ಚುನಾವಣೆಗೆ ಹೋದದ್ದರಿಂದಲೇ ಇಂಥ ಸೋಲು ಕಾಣಬೇಕಾಯಿತು.  ಜೆಡಿಎಸ್‌ ಯಾವತ್ತೂ ನಂಬಿಕೆಗೆ ಅರ್ಹವಲ್ಲ. ಕಾಂಗ್ರೆಸ್‌ಗೆ ಭದ್ರನೆಲೆಯಿದ್ದ ಕ್ಷೇತ್ರಗಳಲ್ಲೇ ತೀವ್ರ ಹಿನ್ನಡೆಯಾಗಿದೆ ಎಂದು ಪರಾಜಿತ ಅಭ್ಯರ್ಥಿಗಳ ಸಭೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com