
ಬಸವರಾಜ್ ಹೊರಟ್ಟಿ
Source : UNI
ಧಾರವಾಡ: ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿರುವುದಕ್ಕೆ ಸ್ವಪಕ್ಷ ನಾಯಕ ಮೇಲ್ಮನೆ ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ರಾಜ್ಯ ಮಟ್ಟದ ಕನ್ನಡ ಭೋಧಕರ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಕನ್ನಡ ಭಾಷೆ, ಕನ್ನಡ ಶಾಲೆಗಳ ಬಗ್ಗೆ ಕಾಳಜಿ ಇಲ್ಲ. ಸರ್ಕಾರ ಆಂಗ್ಲಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿರುವುದರಿಂದ ಮಾತೃಭಾಷೆಯನ್ನು ಕಡೆಗಣಿಸಿದಂತಾಗುತ್ತದೆ. ಹೀಗಾಗಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭವನ್ನು ಕೈಬಿಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.
ಈ ವೇಳೆ ಮಾತನಾಡಿದ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು, ಸಚಿವಾಕಾಂಕ್ಷಿಯಾಗಿರುವ ಬಸವರಾಜ್ ಹೊರಟ್ಟಿಯವರು ಮೈತ್ರಿ ಸರ್ಕಾರದಲ್ಲಿ ಸಚಿವರಾಗಲು ಸಾಧ್ಯವಿಲ್ಲ. ಹೊರಟ್ಟಿಯವರು ಕನ್ನಡ ಮಾಧ‍್ಯಮ ಬಗ್ಗೆ ನೆಲ ಜಲ ಭಾಷೆ ಬಗ್ಗೆ ಅಭಿಮಾನ ಹೊಂದಿದ್ದಾರೆ. ಹೊರಟ್ಟಿಯಂತವರು ಈ ಸರ್ಕಾರಕ್ಕೆ ಅಗತ್ಯವಿಲ್ಲ ಎಂದರು.
Stay up to date on all the latest ರಾಜಕೀಯ news