ದೇವೇಗೌಡರು, ಕುಮಾರಸ್ವಾಮಿಯವರ ತೀರ್ಮಾನಕ್ಕೆ ಬದ್ಧ: ಹೆಚ್ ಡಿ ರೇವಣ್ಣ

ಪಕ್ಷದಲ್ಲಿ ತಮ್ಮ ತಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಸೋದರ ಹೆಚ್ ಡಿ ಕುಮಾರಸ್ವಾಮಿಯವರು...

Published: 04th March 2019 12:00 PM  |   Last Updated: 04th March 2019 02:21 AM   |  A+A-


H D Revanna

ಹೆಚ್ ಡಿ ರೇವಣ್ಣ

Posted By : SUD SUD
Source : Online Desk
ಬೆಂಗಳೂರು: ಪಕ್ಷದಲ್ಲಿ ತಮ್ಮ ತಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಸೋದರ ಹೆಚ್ ಡಿ ಕುಮಾರಸ್ವಾಮಿಯವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ತಿಳಿಸಿದ್ದಾರೆ.

ಶಿವರಾತ್ರಿ ಅಂಗವಾಗಿ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನಕ್ಕ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಮನ್ವಯ ಸಮಿತಿ ಸಭೆಯಲ್ಲಿ ಎರಡೂ ಪಕ್ಷಗಳ ಹಿರಿಯ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಹೇಳಿದರು.

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮೈತ್ರಿಕೂಟಗಳ ನಡುವೆ ಟಿಕೆಟ್ ಹಂಚಿಕೆ ಸಂಬಂಧ ಇಂದು ನಡೆಯುವ ಸಭೆ ಅತ್ಯಂತ ಮಹತ್ವದ್ದಾಗಿದೆ. ನಾನು ಶಿವರಾತ್ರಿ ಅಂಗವಾಗಿ ದೇವರ ದರ್ಶನ ಮಾಡಲು ಬಂದಿದ್ದೇನೆ, ಈಶ್ವರನು ರಾಜ್ಯದ ಜನತೆಗೆ ಒಳ್ಳೆಯದನ್ನು ಮಾಡಲಿ, ಹಿರಿಯರು ಪಕ್ಷದಲ್ಲಿ ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದನ್ನು ಅನುಸರಿಸಿಕೊಂಡು ಹೋಗುವುದಾಗಿ ತಿಳಿಸಿದರು.
Stay up to date on all the latest ರಾಜಕೀಯ news
Poll
Babri Masjid

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯ ಒದಗಿಸಲಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp