ಸೀಟು ಹಂಚಿಕೆ ಬಿಕ್ಕಟ್ಟು ಶಮನಕ್ಕೆ ಸಮನ್ವಯ ಸಮಿತಿ ಸಭೆ ವಿಫಲ: ಒಂದು ವಾರದಲ್ಲಿ ಪೂರ್ಣ- ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ಬಿಕ್ಕಟ್ಟು ಶಮನಗೊಳಿಸಲು ಕೆ.ಕೆ.ಗೆಸ್ಟ್‌ ಹೌಸ್‌ನಲ್ಲಿಂದು ನಡೆದ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ ವಿಫಲವಾಗಿದೆ.

Published: 04th March 2019 12:00 PM  |   Last Updated: 04th March 2019 02:20 AM   |  A+A-


Casual Photo

ಸಾಂದರ್ಭಿಕ ಚಿತ್ರ

Posted By : ABN ABN
Source : UNI
ಬೆಂಗಳೂರು: ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ಬಿಕ್ಕಟ್ಟು ಶಮನಗೊಳಿಸಲು ಕೆ.ಕೆ.ಗೆಸ್ಟ್‌ ಹೌಸ್‌ನಲ್ಲಿಂದು ನಡೆದ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ ವಿಫಲವಾಗಿದೆ.ಜೆಡಿಎಸ್ 12 ಸ್ಥಾನಗಳಿಗೆ ಪಟ್ಟು ಹಿಡಿದಿದ್ದರಿಂದ ಇಂದಿನ ಸಮನ್ವಯ ಸಮಿತಿ ಸಭೆಯಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಮಂಡ್ಯ ಮತ್ತು ಹಾಸನ ಕ್ಷೇತ್ರಗಳ ಬಗ್ಗೆ ಚರ್ಚೆ ಬೇಡ, ಈ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲೇಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆಯಲ್ಲಿ ಬೇಡಿಕೆ ಇಟ್ಟಾಗ ಅದಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಯಚೂರು, ಚಿತ್ರದುರ್ಗ ಕೊಡಲು ಸಾಧ್ಯವಿಲ್ಲ. ಎಂಟು ಕ್ಷೇತ್ರಗಳನ್ನು ಬಿಟ್ಟುಕೊಡಲು ಯಾವುದೇ ಅಭ್ಯಂತರವಿಲ್ಲ ಎಂದು ಸಿದ್ದರಾಮಯ್ಯ  ಹೇಳಿದರು. ಆದರೆ ಇದಕ್ಕೆ ಜೆಡಿಎಸ್ ನಾಯಕರು ಒಪ್ಪಲು ಸಿದ್ಧರಾಗಲಿಲ್ಲ. ಹಾಗಾಗಿ, ಸಮಿತಿ ಸಭೆ ಅರ್ಧಕ್ಕೆ ಮೊಟಕುಗೊಳಿಸಲಾಯಿತು ಎಂದು ತಿಳಿದುಬಂದಿದೆ.

ಮೈಸೂರು, ಬೆಂಗಳೂರು ಉತ್ತರ ಕ್ಷೇತ್ರಗಳ ಬಗ್ಗೆ ಇನ್ನೊಂದು ಸುತ್ತಿನ ಚರ್ಚೆ ನಡೆಸೋಣ. ಹಾಲಿ ಸಂಸದರ ಲೋಕಸಭಾ ಕ್ಷೇತ್ರಗಳಿಗೆ ಬೇಡಿಕೆ ಇಡಬೇಡಿ ಎಂದು ಸಿದ್ದರಾಮಯ್ಯ ಹೇಳಿದರು ಎಂದು ತಿಳಿದುಬಂದಿದೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಸೀಟು ಹಂಚಿಕೆ ವಿಷಯದಲ್ಲಿ ಇಂದಿನ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಇನ್ನೂ ಅಂತಿಮಗೊಂಡಿಲ್ಲ. ಇನ್ನೊಂದು ಸುತ್ತಿನ ಮಾತುಕತೆ ನಡೆಸಬೇಕಿದೆ. ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಮುಗಿಯಲಿದೆ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಫಲಪ್ರದ ಚರ್ಚೆ ನಡೆದಿದೆ. ಹೆಚ್ಚಿನ ಸ್ಥಾನ ಗಳಿಸುವುದು, ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಎಲ್ಲವೂ ಸರಿಯಾದ ದಾರಿಯಲ್ಲೇ ಹೋಗುತ್ತಿದೆ. ರಾಜ್ಯಮಟ್ಟದಲ್ಲೇ ಸೀಟು ಹಂಚಿಕೆ ಇತ್ಯರ್ಥವಾಗುವ ವಿಶ್ವಾಸವಿದೆ ಎಂದರು.

ಶಾಸಕ ಉಮೇಶ್‌ ಜಾದವ್‌, ರಾಜೀನಾಮೆ ನೀಡಿರುವ ವಿಷಯದ ಬಗ್ಗೆ ಪ್ರಸ್ತಾಪಿಸಿದ ಅವರು, ಜಾಧವ್ ರಾಜೀನಾಮೆ ಕೊಡುವುದಕ್ಕೆ ಸ್ವತಂತ್ರರು. ಅವರ ಮೇಲೆ ನಾನು ಈಗಾಗಲೇ ಸ್ಪೀಕರ್  ಅವರಿಗೆ ಅರ್ಜಿ ಕೊಟ್ಟಿದ್ದೇನೆ. ಪೂರಕ ದಾಖಲೆಗಳನ್ನೆಲ್ಲಾ ಈ ಹಿಂದೆಯೇ ಕೊಟ್ಟಿದ್ದೇನೆ. ಈ ಅರ್ಜಿ ವಿಚಾರಣೆಗೆ ಬಾಕಿ ಇದೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಮಾತನಾಡಿ, ಇನ್ನೆರೆಡು ದಿನಗಳಲ್ಲಿ ಸೀಟು ಹಂಚಿಕೆ ಇತ್ಯರ್ಥವಾಗಲಿದೆ. ಸಮನ್ವಯ ಸಮಿತಿ ಸಭೆಯಲ್ಲಿ ಎಲ್ಲಾ ವಿಚಾರಗಳ ಬಗ್ಗೆಯೂ ಚರ್ಚೆ ನಡೆದಿದೆ. ಜೆಡಿಎಸ್‌ನವರು 12 ಸೀಟು ಕೇಳುವುದರಲ್ಲಿ ತಪ್ಪಿಲ್ಲ.  ಅಂತಿಮವಾಗಿ ಎಲ್ಲರೂ ಕುಳಿತು  ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಮಾತನಾಡಿ, ಎರಡೂ ಪಕ್ಷಗಳು ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡಿವೆ. ಕಳೆದ ವಾರ ಜೆಡಿಎಸ್ ಮುಖಂಡರಾದ ಎಚ್‌.ಡಿ. ರೇವಣ್ಣ ಮತ್ತು ವಿಶ್ವನಾಥ್ ಅವರು ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದ್ದರು. ಆ ಸಭೆಯಲ್ಲಿ ನಡೆದ ಚರ್ಚೆಯ ವಿಚಾರಗಳನ್ನು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.
Stay up to date on all the latest ರಾಜಕೀಯ news
Poll
Rohit Sharma

ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾದ ಸಾಧನೆಯ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp