ಬಿ.ಕೆ. ಹರಿಪ್ರಸಾದ್ ಮ್ಯಾಚ್ ಫಿಕ್ಸಿಂಗ್ ಹೇಳಿಕೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಸೆಗೆ ಉರುಳು?

: ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂಬ ರಾಜ್ಯ ಸಭಾ ಸದಸ್ಯ ಬಿ.ಕೆ ಹರಿ ಪ್ರಸಾದ್ ...
ಬಿ,ಕೆ ಹರಿಪ್ರಸಾದ್
ಬಿ,ಕೆ ಹರಿಪ್ರಸಾದ್
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂಬ ರಾಜ್ಯ ಸಭಾ ಸದಸ್ಯ ಬಿ.ಕೆ ಹರಿ ಪ್ರಸಾದ್ ಹೇಳಿಕೆ ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ಕಾರ್ಯಕರ್ತರಿಗೆ ಆಘಾತ ತಂದಿದೆ.
ಬಿ.ಕೆ ಹರಿಪ್ರಸಾದ್ ಅವರ ಹೇಳಿಕೆ ಚುನಾವಣೆ ಹತ್ತಿರ ಬರುತ್ತಿರುವ ಸಮಯದಲ್ಲಿ ಬಿಜೆಪಿ ಟೀಕೆಗೆ ಆಹಾರವಾಗಲಿದೆ, ಭಯೋತ್ಪಾದಕರ ವಿರುದ್ಧ ಹೋರಾಡುವಂತೆ ಕರೆ ನೀಡುತ್ತಿರುವ ಬಿಜೆಪಿಗೆ ಹರಿಪ್ರಸಾದ್ ಹೇಳಿಕೆ ಕಾಂಗ್ರೆಸ್ ವಿರುದ್ಧ ಹರಿಹಾಯಲು ಸಹಾಯ ಮಾಡಲಿದೆ ಎಂದು ಸ್ಥಳೀಯ ಕಾಂಗ್ರೆಸ್ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.
ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಬಿ,ಕೆ ಹರಿಪ್ರಸಾದ್ ಅವರ ಹೇಳಿಕೆಯಿಂದಾಗಿ ರಾಷ್ಟ್ರೀಯತೆ ಭಾವನೆ ಅಧಿಕವಾಗಿರುವ ದಕ್ಷಿಣ ಕನ್ನಡ ಜನತೆಗೆ ನೋವುಂಟು ಮಾಡಿದೆ., ಕೇವಲ ದಕ್ಷಿಣ ಕನ್ನಡ ಮಾತ್ರವಲ್ಲ, ನೆರೆಹೊರೆಯ ಲೋಕಸಭೆ ಕ್ಷೇತ್ರದ ಜನತೆಗೂ ಈ ಹೇಳಿಕೆ ಇರಿಸು ಮುರಿಸು ತಂದಿದೆ.
ಜನಾರರ್ಧನ ಪೂಜಾರಿ ಬದಲಿಗೆ ಬಿಲ್ಲವ ಸಮುದಾಯದ  ಬಿ.ಕೆ ಹರಿ ಪ್ರಸಾದ್ ಅವರಿಗೆ 
ಟಿಕೆಟ್ ನೀಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ, ಇನ್ನೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ರಮಾನಾಥ ರೈ ಯುವ ನಾಯಕ ಮಿಥುನ್ ರೈಸ ಹಾಗೂ ಎಂಎಲ್ ಸಿ ಡಿಸೋಜಾ ಕೂಡ ಲೋಕಸಮರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಕರಾವಲಿ ತೀರದ ದಕ್ಷಿಣಕನ್ನಡ ಲೋಕಸಭೆ ಕ್ಷೇತ್ರಕ್ಕೆ  ಹರಿಪ್ರಸಾದ್ ಅವರನ್ನು ತರಬೇಕೆಂಬುದು ಕಾಂಗ್ರೆಸ್ ನಾಯಕರ ಬಯಕೆಯಾಗಿತ್ತು. ಆದೆರ ಮ್ಯಾಚ್ ಫಿಕ್ಸಿಂಗ್ ಹೇಳಿಕೆ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿದ್ದು, ಹರಿಪ್ರಸಾದ್ ಅವರಿಗೆ ಟಿಕೆಟ್ ನೀಡುವ ಅವಕಾಶ ಕಡಿಮೆ ಎಂದು ಹೇಳಲಾಗುತ್ತಿದೆ, 
ದಕ್ಷಿಣ ಕನ್ನಡ ಭಾಗದಲ್ಲಿ ಹಿಂದುತ್ವ ರಾಜಕಾರಣ ಪ್ರಮುಖ ಪಾತ್ರವಹಿಸಿದೆ, ಆದರೆ ಹರಿಪ್ರಸಾದ್ ತಮ್ಮ ಹೇಳಿಕೆಯಿಂದ ತಾವೇ ಸಂಕಷ್ಟ ಆಹ್ವಾನಿಸಿಕೊಂಡಿದ್ದಾರೆ ಎಂದು ಮತ್ತೊಬ್ಬ ಕಾಂಗ್ರೆಸ್ ಮುಖಂಡ ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com