ಚಾಮರಾಜನಗರದಿಂದ ಸ್ಪರ್ಧಿಸುವಂತೆ ಶ್ರೀನಿವಾಸ ಪ್ರಸಾದ್ ಮೇಲೆ ಹೆಚ್ಚಿದ ಒತ್ತಡ

ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರದಿಂದ ಸ್ಪರ್ದಿಸುವಂತೆ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳು ಒತ್ತಡ ಹೇರುತ್ತಿದ್ದಾರೆ....
ಶ್ರೀನಿವಾಸ್ ಪ್ರಸಾದ್
ಶ್ರೀನಿವಾಸ್ ಪ್ರಸಾದ್
ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರದಿಂದ ಸ್ಪರ್ದಿಸುವಂತೆ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳು ಒತ್ತಡ ಹೇರುತ್ತಿದ್ದಾರೆ.
ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡ ಬಳಿಕ ಚುನಾವಣಾ ಸ್ಪರ್ಧೆಯಿಂದ ದೂರವೇ ಇರುವ  ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ನ ಧ್ರುವನಾರಾಯಣ್ ವಿರುದ್ಧ ಪ್ರಬಲ ಅಭ್ಯರ್ಥಿಯಾಗಿದ್ದಾರೆ.  ಹೀಗಾಗಿ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಸ್ಫಧೆ ಮಾಡಬೇಕೆಂದು ನೂರಾರು ಸಂಖ್ಯೆಯ ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಒತ್ತಾಯಿಸುತ್ತಿರುವುದು ಹೊಸಬೆಳವಣಿಗೆಯಾಗಿದೆ.
ಕೆಲವು ಅಭಿಮಾನಿಗಳು ಚಾಮರಾಜನಗರದಿಂದ ಮೈಸೂರಿಗೆ ತೆರಳಿ ಅಲ್ಲಿನ ನಿವಾಸದಲ್ಲಿ ಶ್ರೀನಿವಾಸ್‌ಪ್ರಸಾದ್ ಅವರನ್ನು ಭೇಟಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಲು ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ. ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಪ್ರಸಾದ್ ಅವರು ಸೂಕ್ತ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡಲು ಅವರಿಂದ ಮಾತ್ರ ಸಾಧ್ಯ. ಅವರು ಕಳೆದ ಹಲವು ದಶಕಗಳಿಂದ ಸಂಸದರಾಗಿ ಹಾಗೂ ರಾಜ್ಯ ಸಚಿವರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. 
ಅನುಭವಿ ರಾಜಕಾರಣಿಯಾಗಿರುವ ಶ್ರೀನಿವಾಸ್ ಪ್ರಸಾದ್ ಸಮರ್ಥ ಅಭ್ಯರ್ಥಿ ಎಂಬುದು ಬಿಜೆಪಿ ನಾಯರ ವೆಂಕಟಸ್ವಾಮಿ ಅವರ ಅಭಿಪ್ರಾಯವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com