'ಕೈ' ಬಿಟ್ಟು 'ಕಮಲ' ಹಿಡಿದ ಮಾಜಿ ಶಾಸಕ ಎ ಮಂಜುಗೆ ಬಿಜೆಪಿಯಿಂದ ಹಾಸನದ ಟಿಕೆಟ್ ಸಾಧ್ಯತೆ!

ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎ ಮಂಜು ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ 'ಕೈ' ಕೊಟ್ಟಿದ್ದು, ನಿನ್ನೆ ಸಂಜೆ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿಗೆ ಸೇರ್ಪಡೆಯಾದ ಎ ಮಂಜು
ಬಿಜೆಪಿಗೆ ಸೇರ್ಪಡೆಯಾದ ಎ ಮಂಜು
ಹಾಸನ: ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎ ಮಂಜು ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ 'ಕೈ' ಕೊಟ್ಟಿದ್ದು, ನಿನ್ನೆ ಸಂಜೆ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ಮೈತ್ರಿ ಧರ್ಮದ ಅಭ್ಯರ್ಥಿಯಾಗಿ ದೇವೇಗೌಡರೇ ಹಾಸನದಲ್ಲಿ ಸ್ಪರ್ಧೆ ಮಾಡಬೇಕು ಇಲ್ಲವಾದರೆ ನಮ್ಮ ಬೆಂಬಲ ಇರುವುದಿಲ್ಲ ಎನ್ನುತ್ತಿದ್ದ ಮಾಜಿ ಸಚಿವ ಎ.ಮಂಜು ಅವರು ಕೊನೆಗೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನಿನ್ನೆ ಸಂಜೆ ವೇಳೆಗೆ ದಿಢೀರ್ ಎಂದು ಹಾಸನದ ಆರ್ ಪುರಂ ನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಎ.ಮಂಜು ಅವರು, ತರಾತುರಿಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದರು. ಆ ಮೂಲಕ ಅಧಿಕೃತವಾಗಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾದರು.
ಹಾಸನ ಶಾಸಕ ಪ್ರೀತಂ ಗೌಡ ಅವರು ಮಂಜು ಅವರಿಗೆ ಬಿಜೆಪಿ ಶಾಲು ಹೊದಿಸಿ, ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತ ನೀಡಿದರು. ಇಂದು ರಾಜ್ಯ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಮಂಜು ಅವರ ಸೇರ್ಪಡೆ ಬಗ್ಗೆ ಘೋಷಣೆಯಾಗಲಿದೆ. ಇದರೊಂದಿಗೆ ಪ್ರಜ್ವಲ್ ರೇವಣ್ಣ ವಿರುದ್ಧ ಬಿಜೆಪಿಯಿಂದ ಎ.ಮಂಜು ಅವರು ಸ್ಪರ್ಧೆ ಮಾಡುವುದು ಖಚಿತವಾಗಿದೆ. ಅಲ್ಲದೇ ಪಕ್ಷದಿಂದ ಟಿಕೆಟ್ ಸಿಗುವುದು ಖಚಿತ ಎಂಬ ಬಗ್ಗೆ ಮೂಲಗಳಿಂದ ಮಾಹಿತಿ ಲಭಿಸಿದೆ. ಟಿಕೆಟ್ ಸಿಗುವ ಭರವಸೆ ಮೇರೆಗೇ ಮಂಜು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದೂ ಹೇಳಲಾಗುತ್ತಿದೆ.
ಮಿಸ್ ಕಾಲ್ ಕೊಟ್ಟು ಬಿಜೆಪಿ ಸದಸ್ಯತ್ವ ಪಡೆದ ಮಂಜು!
ಬಿಜೆಪಿ ಪಕ್ಷ ಸದಸ್ಯತ್ವವನ್ನು ಆನ್ ಲೈನ್ ನಲ್ಲಿ ಅಂದರೆ ಬಿಜೆಪಿ ಪಕ್ಷದ ನಂಬರಿಗೆ ಮಿಸ್ ಕಾಲ್ ಕೋಡುವ ಮೂಲಕ ಎ. ಮಂಜು ಅವರು ಸದಸ್ಯತ್ವ ಪಡೆದುಕೊಂಡಿದ್ದು ವಿಶೇಷವಾಗಿತ್ತು. ಈ ವೇಳೆ ಮಾತನಾಡಿದ ಎ.ಮಂಜು ಅವರು, ನಾನು ಈಗಾಗಲೇ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರಿಗೆ ರಾಜೀನಾಮೆ ಪತ್ರವನ್ನ ಫ್ಯಾಕ್ಸ್ ಮಾಡಿದ್ದೇನೆ. ನಾನು ಕಾಂಗ್ರೆಸ್ ಬಿಡಲು ದೇವೇಗೌಡರ ಕುಟುಂಬ ರಾಜಕಾರಣವೇ ಕಾರಣ. ತಮ್ಮ ಮೊಮ್ಮಕ್ಕಳಿಗೆ ಸ್ಥಾನ ಕಲ್ಪಿಸಲು ದೇವೇಗೌಡರು ಮುಂದಾಗಿದ್ದಾರೆ ಎಂದು ಆರೋಪ ಮಾಡಿದರು.
ಬಳಿಕ ಮಾತನಾಡಿದ ಶಾಸಕ ಪ್ರೀತಂ ಗೌಡ ಅವರು, ಹಾಸನದಲ್ಲಿ ಈ ಬಾರಿ ಬಿಜೆಪಿ ಗೆಲ್ಲಿಸಲು ಶತ ಪ್ರಯತ್ನ ಮಾಡುತ್ತೇವೆ. ಪಕ್ಷ ಸಂಘಟನೆ ಮಾಡಲು ಲೋಕಸಭಾ ಚುನಾವಣೆ ಗೆಲ್ಲಲು ಮಾಜಿ ಸಚಿವ ಎ,ಮಂಜು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರನ್ನು ಬಿಜೆಪಿಗೆ ಸ್ವಾಗತ ಮಾಡುತ್ತೇನೆ. ಜೆಡಿಎಸ್ ಗೆ ಪರ್ಯಾಯವಾಗಿ ನಿಲ್ಲಲು ಮಾಜಿ ಸಚಿವ ಎ,ಮಂಜು ಬಿಜೆಪಿಗೆ ಆಗಮಿಸಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಬಿಜೆಪಿ ಶಕ್ತಿ ದ್ವಿಗುಣವಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com