ಉತ್ತರ ಕರ್ನಾಟಕದಲ್ಲಿ ಅಸ್ಥಿತ್ವ ಉಳಿಸಿಕೊಳ್ಳಲು ಜಾರಕಿಹೊಳಿ ಸಹೋದರರ ಹೋರಾಟ

ಗೋಕಾಕ್ ಸಾಹುಕಾರ್ ಎಂದೇ ಪ್ರಖ್ಯಾತರಾಗಿರುವ ರಮೇಶ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ...
ರಮೇಶ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ
ಬೆಳಗಾವಿ: ಗೋಕಾಕ್ ಸಾಹುಕಾರ್ ಎಂದೇ ಪ್ರಖ್ಯಾತರಾಗಿರುವ ರಮೇಶ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ರಾಜ್ಯದಲ್ಲಿ ಮೈತ್ರಿ ಸರ್ಕಾರಕ್ಕೆ ಆಪತ್ತು ಎದುರಾಗಲಿದೆ ಎಂಬ ರಾಜಕೀಯ ವಿಶ್ಲೇಷಣೆಗೆ ಪೂರಕವಾಗಿ ಕಾಂಗ್ರೆಸ್ ಅತೃಪ್ತ ಶಾಸಕರ ಚಟುವಟಿಕೆ ಶುರುವಾಗಿದೆ.
ಕಾಂಗ್ರೆಸ್ ಪಾಲಿಗೆ ರೆಬೆಲ್ ಎನಿಸಿಕೊಂಡ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಶನಿವಾರ ಅಥಣಿ ಶಾಸಕ ಮಹೇಶ್ ಕುಮಠಳ್ಳಿ, ಪಕ್ಷೇತರ ಶಾಸಕ ಶಂಕರ್ ಅವರನ್ನು ಮನೆಗೆ ಕರೆಸಿಕೊಂಡು ರ್ಚಚಿಸಿದ್ದಾರೆ.
ಶುಕ್ರವಾರ ರಾತ್ರಿ ಬೆಳಗಾವಿಯಿಂದ ಬೆಂಗಳೂರಿಗೆ ಬಂದ ರಮೇಶ್ ಜಾರಕಿಹೊಳಿ, ಶಾಸಕರ ಬೇಟೆ ಆರಂಭಿಸಿದ್ದಾರೆ ಎಂಬುದು ಗೊತ್ತಾಗಿದೆ.ಮೈತ್ರಿ ಸರ್ಕಾರಕ್ಕೆ ಆಪತ್ತು ಬರಬಾರದೆಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರು ಗೊಂದಲಗಳಿಗೆ ತೇಪೆ ಹಚ್ಚಲು ಮುಂದಾಗಿದ್ದಾರೆ. 
ಕುಂದಗೋಳ, ಚಿಂಚೋಳಿ ಕ್ಷೇತ್ರದ ಅಭ್ಯರ್ಥಿಯನ್ನು ಮೈತ್ರಿ ಅಭ್ಯರ್ಥಿ ಎಂದು ಬಿಂಬಿಸಲು ಸಿಎಂ ಕುಮಾರಸ್ವಾಮಿ ಅವರನ್ನು ಈ 2 ಕ್ಷೇತ್ರದ ಪ್ರಚಾರಕ್ಕೆ ಕರೆತರಲು ಕೈ ನಾಯಕರು ಮುಂದಾಗಿದ್ದಾರೆ. ಶೀಘ್ರವೇ ರ್ಚಚಿಸಿ ಪ್ರಚಾರದ ಸಮಯ ನಿಗದಿ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕುಂದಗೋಳ ಉಪಚುನಾವಣೆ  ಉಸ್ತುವಾರಿ ಗೆ ಡಿ,ಕೆ ಶಿವಕುಮಾರೇ ಬೇಡ ಎಂದು ನಾನು ಹೇಳಲಿಲ್ಲ, ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com