ಮತ್ತೆ ಸಿಎಂ ಆಗುವ ಕುರಿತು ಸಿದ್ದು ಹೇಳಿಕೆ, ತಪ್ಪೇನಿಲ್ಲ ಎಂದು ಎಂಬಿ ಪಾಟೀಲ್ ಸಮರ್ಥನೆ

ರಾಜ್ಯದಲ್ಲಿ ಮತ್ತೆ ಸಿಎಂ ಆಗುವ ಕುರಿತು ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಗೃಹಸಚಿವ ಎಂಬಿ ಪಾಟೀಲ್ ಬೆಂಬಲ ನೀಡಿದ್ದು, ಅವರ ಹೇಳಿಕೆಯಲ್ಲಿ ತಪ್ಪೇನಿಲ್ಲ ಎಂದು ಸಮರ್ಥನೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಆಗುವ ಕುರಿತು ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಗೃಹಸಚಿವ ಎಂಬಿ ಪಾಟೀಲ್ ಬೆಂಬಲ ನೀಡಿದ್ದು, ಅವರ ಹೇಳಿಕೆಯಲ್ಲಿ ತಪ್ಪೇನಿಲ್ಲ ಎಂದು ಸಮರ್ಥನೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ರಾಜ್ಯದಲ್ಲಿ ಜನರ ಆಶೀರ್ವಾದದಿಂದ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಹೇಳಿರುವುದರಲ್ಲಿ ಯಾವ ತಪ್ಪೂ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಈಗಲೂ ಜನಪ್ರಿಯ ಮತ್ತು ವರ್ಚಸ್ವಿ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.
'ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗೆ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ, ವಿಶ್ವಾಸ ಇದೆ. ಹೀಗಾಗಿ ಜನರ ಆಶೀರ್ವಾದದಿಂದ ಮತ್ತೊಮ್ಮೆ ಮುಖ್ಯಮಂತ್ರಿ ಆಗುವುದಾಗಿ ಹೇಳಿದ್ದಾರೆ. ಇದರಲ್ಲಿ ಯಾವುದೇ ತಪ್ಪು ಕಾಣಿಸುತ್ತಿಲ್ಲ. ಮೈತ್ರಿ ಸರ್ಕಾರವನ್ನು ಅಲುಗಾಡಿಸಬೇಕೆಂಬ ದುರುದ್ದೇಶದಿಂದ ಅವರು ಈ ಮಾತನ್ನು ಹೇಳಿಲ್ಲ, ಮುಂದಿನ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿ ಆಗುವುದಾಗಿ ಹೇಳಿದ್ದಾರೆ. ಇದು ಸರಿಯಾಗಿದೆ. ಇದನ್ನು ಬಹುತೇಕ ಎಲ್ಲಾ ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದಾರೆ ಎಂದು ಎಂಬಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com