ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು: 'ಕೈ' ಮುಖಂಡರ ಹೇಳಿಕೆಯ ಒಳಮರ್ಮವೇನು? ಟಾರ್ಗೆಟ್ ಯಾರು?

ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು ಎಂದು ಕಾಂಗ್ರೆಸ್‌ನ ಸಚಿವರು ಸೇರಿ ಮಿತ್ರಪಕ್ಷದ ಕೆಲವು ಶಾಸಕರು ಮೇಲಿಂದ ಮೇಲೆ ಹೇಳಿಕೆ ನೀಡುತ್ತಿದ್ದಾರೆ. ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು ಎಂದು ಕಾಂಗ್ರೆಸ್‌ನ ಸಚಿವರು ಸೇರಿ ಮಿತ್ರಪಕ್ಷದ ಕೆಲವು ಶಾಸಕರು ಮೇಲಿಂದ ಮೇಲೆ ಹೇಳಿಕೆ ನೀಡುತ್ತಿದ್ದಾರೆ. 
ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ಹಿನ್ನೆಲೆಯಲ್ಲಿ ಹಲವು ನಾಯಕರು ಹೇಳಿಕೆ ನೀಡಿದ್ದಾರೆ, ಸಿದ್ದರಾಮಯ್ಯ ಅವರೇ ನಮ್ಮ ನಾಯಕ ಎಂದು ಸಚಿವರುಗಳಾದ ಎಂಬಿ ಪಾಟೀಲ್, ಡಿ,ಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ಹಾಗೂ ಡಾ ಸುಧಾಕರ್ ಅವರ ಹೇಳಿಕೆಗಳು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಈ ನಾಯಕರುಗಳ ಈ ದಿಢೀರ್ ಬದಲಾವಣೆಯ ಮರ್ಮ ಏನಿರಬಹುದು ಎಂದು ಎಲ್ಲರ ತಲೆಕೆಡಿಸಿದೆ. 
ಮತ್ತೊಂದೆಡೆ ಕಾಂಗ್ರೆಸ್ ಶಾಸಕರಾದ ಎಂಟಿಬಿ ನಾಗರಾಜ್, ಪುಟ್ಟರಂಗ ಶೆಟ್ಟಿ ಮತ್ತು ಬಿಡಿಎ ಅಧ್ಯಕ್ಷ ಎಸ್.ಟಿ ಸೋಮಶೇಖರ್ ಕುಮಾರಸ್ವಾಮಿ ಅವರ ವಿರುದ್ಧ ಕೊತಕೊತ ಕುದಿಯುತ್ತಿದ್ದಾರೆ.
ಸಿದ್ದರಾಮಯ್ಯ ರಾಜ್ಯದ ಪ್ರಮುಖ ನಾಯಕ, ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಇರುವುದು ಅವರೊಬ್ಬರಿಗೆ ಮಾತ್ರ, ಪ್ರಮುಖ ಖಾತೆಗಳನ್ನು ಪಡೆಯುವಲ್ಲಿ ಜೆಡಿಎಸ್ ಸಿದ್ದರಾಮಯ್ಯ ಬೆಂಬಲ ಅವಲಂಬಿಸಿದೆ, ಜೆಡಿಎಸ್ ನ ಮೂವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಿದ್ದು ರಾಜ್ಯದ ಜನತೆಗೆ ಬೇಸರ ವ್ಯಕ್ತಪಡಿಸಿದ್ದಾರೆ,
ನಿಗಮ -ಮಂಡಳಿ ಅಧ್ಯಕ್ಷಗಾದಿ ಸಿಕ್ಕರೂ ಅಧಿಕಾರ ಚಲಾಯಿಸಲು ಅವಕಾಶ ಸಿಕ್ಕಿಲ್ಲ ಎಂದು ಕಾಂಗ್ರೆಸ್‌ನ ಕೆಲವು ಶಾಸಕರು ಅತೃಪ್ತಿ ಹೊರಹಾಕುತ್ತಿದ್ದಾರೆ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಗೆ ಕೈಕೊಟ್ಟ ಕಾಂಗ್ರೆಸ್‌ ಮಾಜಿ ಶಾಸಕರು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರೊಟ್ಟಿಗೆ 'ಡಿನ್ನರ್‌ ಪಾರ್ಟಿ' ನಡೆಸಿದ ಪ್ರಕರಣವನ್ನು ಸಿದ್ದರಾಮಯ್ಯ ಸೇರಿ ರಾಜ್ಯ ಕಾಂಗ್ರೆಸ್‌ ನಾಯಕರು ಗಂಭೀರವಾಗಿ ಪರಿಗಣಿಸಲಿಲ್ಲ. ಸಮಾನ ಮನಸ್ಕ ಶಾಸಕರು ಸಭೆಗಳನ್ನು ನಡೆಸಿ ಸರಕಾರದ ವಿರುದ್ಧ ಅತೃಪ್ತಿ ಹೊರಹಾಕುತ್ತಿದ್ದಾರೆ. ಈ ಎಲ್ಲ ಬೆಳವಣಿಗೆ ಕುಮಾರಸ್ವಾಮಿ ಅವರಲ್ಲಿ ಕಳವಳ ಮೂಡಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com