ಮೈತ್ರಿ ಸರ್ಕಾರದ 20 ಶಾಸಕರು ಯಾವಾಗ ಬೇಕಾದರು ನಿರ್ಧಾರ ಕೈಗೊಳ್ಳಬಹುದು: ಬಿಎಸ್ ವೈ

ಮೈತ್ರಿ ಸರ್ಕಾರದ ಬಗ್ಗೆ ಅಸಮಾಧಾನ ಹೊಂದಿರುವ 20 ಶಾಸಕರು ಯಾವಾಗ ಬೇಕಾದರೂ ನಿರ್ಧಾರ ಕೈಗೊಳ್ಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್....
ಬಿ.ಎಸ್ ಯಡಿಯೂರಪ್ಪ
ಬಿ.ಎಸ್ ಯಡಿಯೂರಪ್ಪ
ಬೆಂಗಳೂರು: ಮೈತ್ರಿ ಸರ್ಕಾರದ ಬಗ್ಗೆ ಅಸಮಾಧಾನ ಹೊಂದಿರುವ 20 ಶಾಸಕರು ಯಾವಾಗ ಬೇಕಾದರೂ ನಿರ್ಧಾರ ಕೈಗೊಳ್ಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಯಡಿಯೂರಪ್ಪ ರಾಜ್ಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಗ್ಗೆ 20 ಶಾಸಕರಿಗೆ ಅತೃಪ್ತಿ ಇದೆ, ಎಂದು ಹೇಳಿರುವ ಯಡಿಯೂರಪ್ಪಅವರ ನಿರ್ಧಾರದ ಬಗ್ಗೆ ಕಾದು ನೋಡೋಣ, ಇದು ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ.
ನಾವು 104 ಶಾಸಕರಿದ್ದೇವೆ, ಕುಂದಗೋಳ, ಚಿಂಚೋಳಿಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ, ಒಟ್ಟು 106 ಶಾಸಕರಾಗುತ್ತಾರೆ. ಪಕ್ಷೇತರ ಶಾಸಕರು ನಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ, ಹೀಗಾಗಿ ನಮಗೆ 109 ಶಾಸಕರ ಬೆಂಬಲ ಸಿಗುತ್ತದೆ ಎಂದು ಹೇಳಿದ್ದಾರೆ. ಮೇ 23ರ ನಂತರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಮೇಲೆ ರಾಜ್ಯ ರಾಜಕಾರಣದಲ್ಲಿ ಧ್ರುವೀಕರಣ ಉಂಟಾಗಲಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com