ಮೇ 23ರ ವರೆಗೆ ಕಾಯಿರಿ: ರಾಜ್ಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ಜೆಡಿಎಸ್ ಮತ್ತು ಅದರ ನಾಯಕರ ಟೀಕೆಗಳಿಂದ ಆಕ್ರೋಶಗೊಂಡಿರುವ ರಾಜ್ಯ ಕಾಂಗ್ರೆಸ್ ನಾಯಕರು ಮೈತ್ರಿ ಮುರಿದುಕೊಳ್ಳುವ ಸೂಚನೆ ನೀಡುತ್ತಿದ್ದಾರೆ....
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಜೆಡಿಎಸ್ ಮತ್ತು ಅದರ ನಾಯಕರ ಟೀಕೆಗಳಿಂದ ಆಕ್ರೋಶಗೊಂಡಿರುವ ರಾಜ್ಯ ಕಾಂಗ್ರೆಸ್ ನಾಯಕರು ಮೈತ್ರಿ ಮುರಿದುಕೊಳ್ಳುವ ಸೂಚನೆ ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳದಿರಲು ನಿರ್ಧರಿಸಿದ್ದು, ಮೇ 23ರ ವರೆಗೆ ಕಾಯಿರಿ ಎಂದು ಸೂಚಿಸಿದೆ.
ಕೆಲವು ಕಾಂಗ್ರೆಸ್ ನಾಯಕರು ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದೇ ತಪ್ಪು ಎನ್ನುತ್ತಿದ್ದು, ವಿಧಾಸಭೆ ವಿಸರ್ಜಿಸಿ ಚುನಾವಣೆಗೆ ಹೋಗುವುದೇ ಸೂಕ್ತ ಎನ್ನುತ್ತಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುವವರೆಗೆ ಕಾಯಿರಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟುಗಳನ್ನು ಗೆಲ್ಲುವ ವಿಶ್ವಾಸದಲ್ಲಿದ್ದು, ಬಳ್ಳಾರಿ, ಮಂಡ್ಯ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮೈತ್ರಿ ಯಶಸ್ವಿಯಾಗಿದೆ. ಹೀಗಾಗಿ ಮೈತ್ರಿಗೆ ಯಾವುದೇ ಅಪಾಯ ಇಲ್ಲ. ಮೇ 23ರ ನಂತರ ಎಲ್ಲಾ ಭಿನ್ನಾಭಿಪ್ರಾಯಗಳು ಶಮನವಾಗಲಿವೆ ಎಂದು ಕೆಸಿ ವೇಣುಗೋಪಾಲ್ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ಮೇ 23ರ ವರೆಗೆ ಯಾವುದೇ ವಿವಾದಾತ್ಮಕ ಹೇಳಿಕೆಗಳನ್ನು ನೀಡದೆ ಮೌನವಾಗಿರುವ ರಾಜ್ಯ ನಾಯಕರಿಗೆ ಸೂಚಿಸಲಾಗಿದೆ. ಮೇ 23ರ ವರೆಗೆ ಯಾವುದೇ ಬೆಳವಣಿಗೆಗಳು ನಡೆಯುವುದಿಲ್ಲ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com