ಲೋಕಸಭೆ ಚುನಾವಣೆ ಫಲಿತಾಂಶದ ನಂತರವೂ ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ನೀಡಲಿದೆ: ದೇವೇಗೌಡ

ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ಮುಂದುವರಿಯಲಿದೆ ಎಂದು ಜೆಡಿಎಸ್ ...
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ
ಚಿತ್ತೂರು: ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ಮುಂದುವರಿಯಲಿದೆ ಎಂದು ಜೆಡಿಎಸ್ ಸರ್ವೋಚ್ಚ ನಾಯಕ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಲೋಕಸಭೆ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳು ಆಗಲಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಅದಕ್ಕೆ ಪ್ರತಿಕ್ರಿಯಿಸಿದ ದೇವೇಗೌಡರು ,ನಾವು ಯಾವಾಗಲೂ ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.
ಈ ಮೊದಲು ರಾಹುಲ್ ಗಾಂಧಿ ಅವರು ಪ್ರಧಾನ ಮಂತ್ರಿಯಾಗಲು  ದೇವೇಗೌಡರು ಬೆಂಬಲ ನೀಡುವುದಾಗಿ ಘೋಷಿಸಿದ್ದರು.ಮೇ 23 ರಂದು ಇಡಿ ದೇಶದ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com