ರಾಜ್ಯ ಅಥವಾ ರಾಷ್ಟ್ರ ರಾಜಕಾರಣ: ಭವಿಷ್ಯದಲ್ಲಿ ಯಡಿಯೂರಪ್ಪ ಪಾತ್ರ ಮೋದಿ ಅಲೆಯಿಂದ ನಿರ್ಧಾರ!

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಸಾಧನೆ ಬಿ.ಎಸ್. ಯಡಿಯೂರಪ್ಪ ಅವರ ಭವಿಷ್ಯವನ್ನು ನಿರ್ಧರಿಸಲಿದೆ.

Published: 20th May 2019 12:00 PM  |   Last Updated: 20th May 2019 02:11 AM   |  A+A-


PM Modi

ಪ್ರಧಾನಿ ಮೋದಿ

Posted By : ABN ABN
Source : The New Indian Express
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಸಾಧನೆ ಬಿ.ಎಸ್. ಯಡಿಯೂರಪ್ಪ ಅವರ ಭವಿಷ್ಯವನ್ನು ನಿರ್ಧರಿಸಲಿದೆ.

ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಯಡಿಯೂರಪ್ಪ ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗುತ್ತಾರೆಯೇ ? ಅಥವಾ ರಾಷ್ಟ್ರ ರಾಜಕಾರಣದಲ್ಲಿ ಪಾತ್ರ ನಿರ್ವಹಿಸಲಿದ್ದಾರೆಯೇ ಎಂಬುದು ಮೋದಿ ಅಲೆಯಿಂದ ನಿರ್ಧಾರವಾಗಲಿದೆ.

ಯಡಿಯೂರಪ್ಪ ಅವರ ಭವಿಷ್ಯದ ಬಗ್ಗೆ ಯಾರೊಬ್ಬರು ಅಧಿಕೃತವಾಗಿ ಮಾತನಾಡುತ್ತಿಲ್ಲ. ಒಂದು ವೇಳೆ 17-19 ಸ್ಥಾನಗಳನ್ನು ಪಡೆದರೆ ಯಡಿಯೂರಪ್ಪ ಪ್ರಮುಖ ನಾಯಕರಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.ಆದರೆ, ಕೆಲವರು ಈ ಮಾತನ್ನು ಒಪ್ಪುವುದಿಲ್ಲ. ಇದು ಮೋದಿ ಚುನಾವಣೆ, ತೇಜಸ್ವಿ ಸೂರ್ಯ ಗೆಲುವು ಸಾಧಿಸಿದರೆ ಅದು ಮೋದಿಯಿಂದ, ಯಡಿಯೂರಪ್ಪ ಅವರಿಂದ ಇಲ್ಲ ಎನ್ನುತ್ತಿದ್ದಾರೆ.

ಒಂದು ವೇಳೆ ಬಿಜೆಪಿ ಕೇಂದ್ರದಲ್ಲಿ ಸ್ಪಷ್ಟ ಬಹುಮತ ಪಡೆದರೆ, ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಆಗುವ ಸಾಧ್ಯತೆಯೂ ಇದೆ. ಪ್ರಸ್ತುತ ಎರಡು ಹುದ್ದೆಗಳನ್ನು ನಿರ್ವಹಿಸುತ್ತಿರುವ ಯಡಿಯೂರಪ್ಪ ಅವರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ. ಯಡಿಯೂರಪ್ಪ ಅವರಿಗೆ 75 ವರ್ಷ ತುಂಬಿದ್ದು, ಅನಾರೋಗ್ಯದ ಸಮಸ್ಯೆಯೂ ಇದೆ. ಇದು ಪಕ್ಷದ ಘಟಕದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಅನಂತ್ ಕುಮಾರ್ ನಿಧನದಿಂದಾಗಿ ಕೇಂದ್ರ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿಯ ಉತ್ತಮ ನಾಯಕರು ಇಲ್ಲದಂತಾಗಿದೆ. ಆದರೆ, ಅಂತಹ ವ್ಯಕ್ತಿತ್ವ ಇಲ್ಲದಿದ್ದರೂ ಯಡಿಯೂರಪ್ಪ ಅವರನ್ನು ಆ ಸ್ಥಾನಕ್ಕೆ ತುಂಬುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ವೇದಿಕೆ ಸಜ್ಜಾಗಿದೆ. ಆರ್ ಎಸ್ ಎಸ್ ಸಂಘಟಕ ಬಿ.ಎಲ್. ಸಂತೋಷ್ ಅವರ ಹೆಸರು ಈ ಸ್ಥಾನಕ್ಕೆ ಪ್ರಬಲವಾಗಿ ಕೇಳಿಬರುತ್ತಿದೆ.

ಒಂದು ವೇಳೆ ಜೆಡಿಎಸ್ - ಕಾಂಗ್ರೆಸ್ ಮೈತ್ರಿ 14 ಕ್ಷೇತ್ರಗಳನ್ನು ಪಡೆದುಕೊಂಡರೆ, ನಾಯಕತ್ವದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಯುವ ಮುಖಗಳಿಗೆ ಅವಕಾಶ ದೊರೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ರಾಜಕೀಯ ವಿಶ್ಲೇಷಕ ಹರೀಶ್ ಬಿಜ್ಜೂರ್ ಹೇಳಿದ್ದಾರೆ.

ಹಳೆ ಮೈಸೂರು ವಲಯದ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಹಾಗೂ ಹಾಸನದ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಈ ಬಾರಿಯ ಚುನಾವಣೆಯಲ್ಲಿ ಕೋಲಾರ- ಚಿಕ್ಕಬಳ್ಳಾಪುರ, ಮತ್ತು ಮೈಸೂರಿನಲ್ಲಿ ಬಿಜೆಪಿ ಗೆಲುವಿನ ನಿರೀಕ್ಷೆಯಲ್ಲಿದೆ.
Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp