ವಿಕೋಪಕ್ಕೆ ತಿರುಗಿದ ಬೆಂಗಳೂರು ಡೈರಿ ಪಾಲಿಟಿಕ್ಸ್: ಮೈತ್ರಿಯಲ್ಲಿ ಶುರುವಾಯ್ತು ಜಂಗಿ ಕುಸ್ತಿ

ಡೈರಿ ರಾಜಕೀಯ ವಿಕೋಪಕ್ಕೆ ತಿರುಗಿದ್ದು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಎಚ್ ಡಿ ರೇವಣ್ಣ ವಿರುದ್ಧ ಕೆಲವು ಕಾಂಗ್ರೆಸ್ ಶಾಸಕರು ...
ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಎಚ್ ಡಿ ರೇವಣ್ಣ
ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಎಚ್ ಡಿ ರೇವಣ್ಣ
ಬೆಂಗಳೂರು: ಡೈರಿ ರಾಜಕೀಯ ವಿಕೋಪಕ್ಕೆ ತಿರುಗಿದ್ದು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಎಚ್ ಡಿ ರೇವಣ್ಣ ವಿರುದ್ಧ ಕೆಲವು ಕಾಂಗ್ರೆಸ್ ಶಾಸಕರು ಕೆಂಡಾಮಂಡಲಾಗಿದ್ದಾರೆ, ಲೋಕಸಭೆಯ ಫಲಿತಾಂಶ ಪ್ರಕಟವಾಗುವ ಮುನ್ನವೇ ದೋಸ್ತಿ ಪಕ್ಷಗಳ ನಡುವೆ ಜಂಗಿ ಕುಸ್ತಿ ಆರಂಭವಾಗಿದೆ. 
ಬೆಂಗಳೂರು ಡೈರಿ ಅಧ್ಯಕ್ಷ ಚುನಾವಣೆ ವಿಚಾರದಲ್ಲಿ ಎಚ್ ಡಿ ರೇವಣ್ಣ ಡಬಲ್ ಗೇಮ್ ಮಾಡುತ್ತಿದ್ದಾರೆ ಎಂದು ಕೈ ಶಾಸಕರು ಆರೋಪ ಮಾಡುತ್ತಿದ್ದಾರೆ, ಏಳು ನಿರ್ದೇಶಕರನ್ನು ಕಾಂಗ್ರೆಸ್ ಹೊಂದಿದ್ದರೂ ಮೂವರು ನಿರ್ದೇಶಕರನ್ನು ಮಾತ್ರ ಹೊಂದಿರುವ ಜೆಡಿಎಸ್, ಚುನಾವಣೆ ಎದುರಿಸುವ ಬದಲು ಮೈತ್ರಿ ಧರ್ಮ ಪಾಲಿಸದೆ ರಾತ್ರೋ ರಾತ್ರಿ ಕಾಂಗ್ರೆಸ್ ಅಭ್ಯರ್ಥಿಯನ್ನೇ ಅನರ್ಹಗೊಳಿಸಿದೆ ಎಂದು ಕಿಡಿ ಕಾರಿದ್ದಾರೆ.
ಹೀಗಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ರೇವಣ್ಣ ವಿರುದ್ಧ ಕಾಂಗ್ರೆಸ್ ನಾಯಕರು ಖಾಸಗಿ ಹೋಟೇಲ್ ನಲ್ಲಿ ಸಭೆ ಸೇರಿ ಜೆಡಿಎಸ್ ದಬ್ಬಾಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಹೀಗೆ ಮುಂದುವರೆದರೆ ಸರ್ಕಾರ ನಡುಸುವುದಕ್ಕೂ ಕಷ್ಟವಾಗಲಿದೆ. ಡೈರಿ ಚುನಾವಣೆಯಲ್ಲೂ ಕಾಂಗ್ರೆಸ್ ನವರಿಗೆ ಜೆಡಿಎಸ್ ಅವಕಾಶ ಕೊಡುವುದಿಲ್ಲ ಅಂದರೆ ಏನರ್ಥ.? ಈ ದಬ್ಬಾಳಿಕೆಯನ್ನು ಸಹಿಸಿಕೊಂಡು ಹೋಗುವುದು ಬೇಡ ಎಂದು ಅಸಮಾಧಾನ ಹೊರ ಹಾಕಿದ್ದಾರೆ. 
ಮುಖ್ಯಮಂತ್ರಿಯವರಿಗೆ ಎಲ್ಲ ವಿಚಾರಗಳೂ ಗೊತ್ತಿದ್ದರೂ ಬೇಕೆಂದೇ ನಾಟಕವಾಡುತ್ತಿದ್ದಾರೆ, ಬಮೂಲ್‌ಗೂ ರೇವಣ್ಣಗೂ ಏನು ಸಂಬಂಧ.? ಬಮೂಲ್ ಮೇಲೆ ರೇವಣ್ಣ ಯಾಕೆ ದಬ್ಬಾಳಿಕೆ ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಸಿಡಿಮಿಡಿಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com