ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಯಡಿಯೂರಪ್ಪ, ಎಸ್.ಎಂ ಕೃಷ್ಣರ ಭೇಟಿ ವೇಳೆ ಕಾಣಿಸಿಕೊಂಡ ಅತೃಪ್ತ ಕೈ ಶಾಸಕರು, ಆಪರೇಶನ್ ಕಮಲ?

ಲೋಕಸಭೆ ಚುನಾವಣಾ ಫಲಿತಾಂಶ ಬೆನ್ನಲ್ಲೇ ಇದೀಗ ಮೈತ್ರಿ ಸರ್ಕಾರವನ್ನು ಕೆಡವಿ ಸರ್ಕಾರ ರಚಿಸುವ ನಿಟ್ಟಿನಲ್ಲಿ ಬಿಜೆಪಿ ಕಾಂಗ್ರೆಸ್ ನ ಅತೃಪ್ತ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸಿದೆ.
ಬೆಂಗಳೂರು: ಲೋಕಸಭೆ ಚುನಾವಣಾ ಫಲಿತಾಂಶ ಬೆನ್ನಲ್ಲೇ ಇದೀಗ ಮೈತ್ರಿ ಸರ್ಕಾರವನ್ನು ಕೆಡವಿ ಸರ್ಕಾರ ರಚಿಸುವ ನಿಟ್ಟಿನಲ್ಲಿ ಬಿಜೆಪಿ ಕಾಂಗ್ರೆಸ್ ನ ಅತೃಪ್ತ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸಿದೆ. ಯಡಿಯೂರಪ್ಪ ಅವರು ಎಸ್.ಎಂ ಕೃಷ್ಣರ ಭೇಟಿ ವೇಳೆ ಕೃಷ್ಣ ಅವರ ಮನೆಯಲ್ಲಿ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಡಾ. ಸುಧಾಕರ್ ಅವರು ಕಾಣಿಸಿಕೊಂಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಎಸ್ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದರು. ಇದೇ ವೇಳೆ ಅತೃಪ್ತ ಕೈ ಶಾಸಕರು ಕೃಷ್ಣ ಅವರ ಮನೆಯಲ್ಲಿ ಕಾಣಿಸಿಕೊಂಡಿದ್ದರು. 
ಎಸ್.ಎಂ ಕೃಷ್ಣ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಆಪರೇಷನ್ ಕಮಲ ಏನು ನಡೆಯುತ್ತಿಲ್ಲ. ರಮೇಶ್ ಜಾರಕಿಹೊಳಿ ಮತ್ತು ಡಾ. ಸುಧಾಕರ್ ಕೃಷ್ಣ ಅವರ ಅಭಿಮಾನಿಗಳು ಹೀಗಾಗಿ ಅವರನ್ನು ಭೇಟಿಯಾಗಲು ಬಂದಿದ್ದಾರೆ. ಇದೇ ಸಂದರ್ಭದಲ್ಲಿ ನಾವು ಬಂದಿದ್ದು ಕಾಕತಾಳೀಯ. ಇದರಲ್ಲಿ ಯಾವುದೇ ತಂತ್ರವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ನಂತರ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಎಸ್ಎಂ ಕೃಷ್ಣ ಅವರು ಹಿರಿಯರು, ಆರೋಗ್ಯ ವಿಚಾರಿಸಲು ಬಂದಿದ್ದೆ. ಬೇರೆ ಯಾವುದೇ ರಾಜಕೀಯ ವಿಷಯಗಳನ್ನು ಮಾತನಾಡಲಿಲ್ಲ. ನಾನು ರಾಜಿನಾಮೆ ನೀಡುವ ದಿನ ಮಾಧ್ಯಮಗಳಿಗೆ ತಿಳಿಸುತ್ತೇನೆ ಎಂದರು. ಇದೇ ವೇಳೆ ಮಾತನಾಡಿದ ಕೆ. ಸುಧಾಕರ್ ಅವರು ಬಿಜೆಪಿಯಲ್ಲಿದ್ದರೂ ಕೃಷ್ಣ ಅವರದ್ದು ಆದರ್ಶ ವ್ಯಕ್ತಿತ್ವ ಹೊಂದಿರುವವರು ಹೀಗಾಗಿ ಅವರನ್ನು ಮಾತನಾಡಿಸಲು ಬಂದಿದ್ದೆ ಎಂದು ಹೇಳಿದರು. 

Related Stories

No stories found.

Advertisement

X
Kannada Prabha
www.kannadaprabha.com