ರಮೇಶ್‌ ಜಾರಕಿಹೊಳಿ ಸೇರಿ ಯಾರೂ ಪಕ್ಷ ಬಿಡಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿದೆ: ಸಿದ್ದರಾಮಯ್ಯ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿದೆ. ರಮೇಶ್ ಜಾರಕಿಹೊಳಿ ಸೇರಿದಂತೆ ಯಾರೂ ಪಕ್ಷ ಬಿಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
ಮೈಸೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿದೆ. ರಮೇಶ್ ಜಾರಕಿಹೊಳಿ ಸೇರಿದಂತೆ ಯಾರೂ ಪಕ್ಷ ಬಿಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ಸೇರಿದಂತೆ ಯಾವೊಬ್ಬ ಕಾಂಗ್ರೆಸ್ ಶಾಸಕರೂ ಪಕ್ಷ ತೊರೆಯುವುದಿಲ್ಲ. ಕಳೆದ ಒಂದು ವರ್ಷದಿಂದ ಸರ್ಕಾರ ಬೀಳುತ್ತೆ ಅಂತ ಯಡಿಯೂರಪ್ಪ ಅವರು ಹೇಳುತ್ತಲೆ ಇದ್ದಾರೆ. ಇನ್ನೂ ನಾಲ್ಕು ವರ್ಷ ಅದೇ ಮಾತು ಹೇಳುತ್ತಲೇ ಇರುತ್ತಾರೆ. ಆದರೆ ಸರ್ಕಾರ ಮಾತ್ರ ಸುಭದ್ರವಾಗಿರುತ್ತದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ, ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ಮತ ನೀಡಿರುವುದು ಕೇಂದ್ರದಲ್ಲಿ ಅಧಿಕಾರ ನಡೆಸಲಿ ಎಂದೇ ಹೊರತು ರಾಜ್ಯದಲ್ಲಿನ ಸರ್ಕಾರ ಬೀಳಿಸಿ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದಲ್ಲ. ಲೋಕಸಭಾ ಫಲಿತಾಂಶ ನಮಗೆ ವಿರುದ್ಧವಾಗಿ ಬಂದ ಮಾತ್ರಕ್ಕೆ ವಿಧಾನಸಭೆಯನ್ನೂ ವಿಸರ್ಜನೆ ಮಾಡಲಿ ಎಂದು ಹೇಳುವುದು ನಾನ್ ಸೆನ್ಸ್ ಎಂದು ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಕ್ಕು ಮುನ್ನ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ, ಯಡಿಯೂರಪ್ಪ ಅವರು ಮೇಲಿಂದ ಮೇಲೆ ಮೈತ್ರಿ ಸರ್ಕಾರ ಬೀಳುತ್ತದೆ ಎಂದು ಹೇಳುತ್ತಲೇ ಇದ್ದಾರೆ. ಇದೀಗ ಜೂನ್‌ 1 ರಂದು ಸಿಎಂ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಬೀಳುತ್ತದೆ ಎಂದಿದ್ದಾರೆ. ಒಂದು ವೇಳೆ ಜೂನ್‌ 1 ರಂದು ರಾಜ್ಯ ಸರ್ಕಾರ ಬೀಳದೇ ಇದ್ದರೆ ಯಡಿಯೂರಪ್ಪ ರಾಜೀನಾಮೆ ಕೊಡುತ್ತಾರೆಯೇ? ಎಂದು ಪ್ರಶ್ನಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com