ಸಂಪುಟ ವಿಸ್ತರಣೆ ಕಸರತ್ತು: ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಭೇಟಿ ಮಾಡಿದ ಸಿಎಂ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಆಪತ್ತು ಎದುರಾಗಿದ್ದು,...
ಎಚ್ ಡಿ ಕುಮಾರಸ್ವಾಮಿ, ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ
ಎಚ್ ಡಿ ಕುಮಾರಸ್ವಾಮಿ, ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಆಪತ್ತು ಎದುರಾಗಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದರು.
ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ಮೈತ್ರಿ ನಾಯಕರು, ಇದೀಗ ಸಚಿವ ಸಂಪುಟ ವಿಸ್ತರಣೆ ಜೇನುಗುಡಿಗೆ ಕೈ ಹಾಕಿದ್ದಾರೆ. ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಆಪರೇಷನ್ ಆಪತ್ತಿನಿಂದ ಪಾರಾಗಲು ಯತ್ನಿಸುತ್ತಿದ್ದಾರೆ.
ಇಂದು ಸಂಜೆ ಬೆಂಗಳೂರಿಗೆ ಆಗಮಿಸಬೇಕಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಮತ್ತು ಗುಲಾ ನಬಿ ಆಜಾದ್ ಅವರು ತಡರಾತ್ರಿ ನಗರಕ್ಕೆ ಆಗಮಿಸಿದ್ದರಿಂದ, ಅವರು ಬರುವ ಮುನ್ನವೇ ಸಿಎಂ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರ ಜತೆ ಕುಮಾರಕೃಪ ಅತಿಥಿ ಗೃಹದಲ್ಲಿ ಮಹತ್ವದ ಸಭೆ ನಡೆಸಿದರು.
ಆಪರೇಷನ್ ಕಮಲ ತಡೆಯುವ ಬಗ್ಗೆ ಮತ್ತು ಮೈತ್ರಿ ಸರ್ಕಾರದ ರಕ್ಷಣೆಗೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಂಪುಟ ವಿಸ್ತರಣೆ ಮಾಡಬೇಕೇ ಅಥವಾ ಪುನಾರಚನೆ ಮಾಡಬೇಕೇ ಎಂಬುದರ ಬಗ್ಗೆ ಚರ್ಚಿಸಿದ್ದಾರೆ. ಒಂದು ಸಂಪುಟ ಪುನಾರಚನೆ ಮಾಡುವುದಾದರೆ ಯಾರನ್ನು ಕೈಬಿಡಬೇಕು ಮತ್ತು ಯಾರಿಗೆ ಸಚಿವ ಸ್ಥಾನ ನೀಡಬೇಕು. ಇದರಿಂದ ಅಸಮಾಧಾನ ಶಮನಗೊಳ್ಳದೆ ಮತ್ತಷ್ಟು ಉಲ್ಬಣಿಸಿದರೆ ಮುಂದೇನು ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com