ಮೈತ್ರಿ ಭಿನ್ನಮತ ಕೊತಕೊತ: ಎಲ್ಲವೂ ಸರಿಯಾಗಿದೆ ಎಂದು ಬಿಂಬಿಸಲು ಸಿದ್ದರಾಮಯ್ಯ, ಕುಮಾರಸ್ವಾಮಿ ತಿಣುಕಾಟ!

ಲೋಕಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಸರ್ಕಾರ ಎಲ್ಲವೂ ಸರಿಯಿದೆ ಎಂದು ....
ಕುಮಾರಸ್ವಾಮಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್
ಕುಮಾರಸ್ವಾಮಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಸರ್ಕಾರ ಎಲ್ಲವೂ ಸರಿಯಿದೆ ಎಂದು ತೋರಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಹಾಲಿ ಸಿಎಂ ಕುಮಾರಸ್ವಾಮಿ, ಮತ್ತೊಮ್ಮೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ,  ಹೀಗಾಗಿ ಅದನ್ನು ಸರಿಪಡಿಸಿಕೊಳ್ಳಲು ಮೈತ್ರಿ ಪಕ್ಷಗಳು ಹೆಣಗಾಡುತ್ತಿವೆ.
ಸರ್ಕಾರ ಸುಭದ್ರವಾಗಿದೆ ಎಂದು ಜನರಿಗೆ ಹಾಗೂ ನಾಯಕರುಗಳಿಗೆ ಭರವಸೆ ಮೂಡಿಸಲು ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಒಟ್ಟಿಗೆ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ. 
ಕಳೆದ ನಾಲ್ಕು ದಿನಗಳಲ್ಲಿ  ಮೂರು ಸಭೆ ನಡೆದಿದ್ದು, ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಹಲವು ಚರ್ಚೆ ನಡೆದಿವೆ. ಕುಮಾರ ಕೃಪ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ದಿನೇಶ್ ಗುಂಡೂರಾವ್ ಕೂಡ ಭಾಗವಹಿಸಿದ್ದರು.
ಕಾಂಗ್ರೆಸ್ ಮುಖಂಡರುಗಳ ಜೊತೆ ಸಿಎಂ ಕುಮಾರಸ್ವಾಮಿ, ಕೆ.ಸಿ ವೇಣುಗೋಪಾಲ್ ಮುಂತಾದವರು ಪಾಲ್ಗೋಂಡಿದ್ದರು. ಕರ್ನಾಟಕದ ಮೈತ್ರಿ ಸರ್ಕಾರವನ್ನು ಸ್ಥಿರವಾಗಿಸಿಕೊಳ್ಳಲು ಕಾಂಗ್ರೆಸ್ ಹೈ ಕಮಾಂಡ್ ಗುಲಾಂ ನಬಿ ಆಜಾದ್ ಮತ್ತು ಕೆಸಿ ವೇಣುಗೋಪಾಲ್ ಅವರಿಗೆ ಜವಬ್ದಾರಿ ವಹಿಸಲಾಗಿದೆ.
ಬುಧವಾರ ಸಚಿವ ಡಿ.ಕೆ ಶಿವಕುಮಾರ್ ಸಿಎಂ ಕುಮಾರಸ್ವಾಮಿ ಅವರ ಮನೆಗೆ ತೆರಳಿ ಭೇಟಿಯಾಗಿದ್ದರು. ಸುಮಾರು ಅರ್ಧ ಗಂಟೆಗಳ ಕಾಲ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.
ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಾಗದಂತೆ ಯಾವುದೇ  ಹೇಳಿಕೆ ನೀಡಬಾರದೆಂದು ಎರಡು ಪಕ್ಷಗಳ ನಾಯಕರುಗಳಿಗೆ ಸೂತನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಎರಡು ಪಕ್ಷಗಳ ನಾಯಕರ ಸಮನ್ವ. ಕಣ್ಣಿಗೆ ಕಾಣುವಂತಿರಬೇಕು ಎಂಬ ಸತ್ಯವನ್ನು ಅರಿತುಕೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕಾಂಗ್ರೆಸ್ ನಾಯಕರುಗಳ ಜೊತೆ ಕಾಣಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಸಿಎಂ ಆಪ್ತರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com