ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಜನ ಬೆಂಬಲ ಗಳಿಸಿದ್ದ ಬಿಜೆಪಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮುಗ್ಗರಿಸಿದೆ. ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಜೆಡಿಎಸ್ ಅಸ್ತಿತ್ವಕ್ಕಾಗಿ ತಿಣುಕಾಡುವಂತಾಗಿದೆ.
ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ 63 ನಗರ ಸ್ಥಳೀಯ ಸಂಸ್ಥೆಗಳ 1221 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 509, ಬಿಜೆಪಿ 365, ಜೆಡಿಎಸ್ 174 ಹಾಗೂ ಪಕ್ಷೇತರರು 172 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ವಿದ್ಧರೂ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳು ಸ್ವತಂತ್ರವಾಗಿ ಎದುರಿಸಿದ ಅಗ್ನಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಕಡೆಗಳಲ್ಲಿ ಗೆಲುವು ಸಾಧಿಸಿದ್ದಾರೆ.
Advertisement