ಜಿಲ್ಲೆಗಳಲ್ಲೇ ಇಲ್ಲ, ಇನ್ನು ತಾಲೂಕಿಗೊಂದು ಹೇಗೆ? ಡಿಕೆಶಿ ವಿರುದ್ಧ ಡಿಸಿಎಂ ಕಿಡಿ

ಹಲವು ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳಿಲ್ಲ, ಇವರು ತಾಲೂಕಿಗೊಂದು ಕಾಲೇಜು ಹಾಕಿಸಿಕೊಂಡರೆ ಹೇಗೆ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ  ಅವರು ಕಿಡಿ ಕಾರಿದ್ದಾರೆ.
ಡಿಕೆ ಶಿವಕುಮಾರ್ ಮತ್ತು ಅಶ್ವತ್ಥ ನಾರಾಯಣ
ಡಿಕೆ ಶಿವಕುಮಾರ್ ಮತ್ತು ಅಶ್ವತ್ಥ ನಾರಾಯಣ

ಬೆಂಗಳೂರು:  ಹಲವು ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳಿಲ್ಲ, ಇವರು ತಾಲೂಕಿಗೊಂದು ಕಾಲೇಜು ಹಾಕಿಸಿಕೊಂಡರೆ ಹೇಗೆ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ  ಅವರು ಕಿಡಿ ಕಾರಿದ್ದಾರೆ.

ಮೆಡಿಕಲ್ ಕಾಲೇಜು ಸ್ಥಳಾಂತರದ ಕುರಿತು ಪ್ರತಿಕ್ರಿಯಿಸಿದ ಅವರು, ಅಧಿಕಾರ ದುರ್ಬಳಕೆ ಮಾಡಿಕೊಂಡು ಅಟ್ಟಹಾಸ ಮರೆದು ಮೆಡಿಕಲ್ ಕಾಲೇಜು ಕನಕಪುರಕ್ಕೆ ಹಾಕಿಸಿಕೊಂಡಿದ್ದರು. ಆದರೆ ಚಿಕ್ಕಬಳ್ಳಾಪುರದಲ್ಲೇ ಮೆಡಿಕಲ್ ಕಾಲೇಜು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಜನರ ತೆರಿಗೆ ಹಣ ದುರುಪಯೋಗ ಮಾಡಿಕೊಂಡಿದ್ದರು. ಹೀಗಾಗಿ ಮೆಡಿಕಲ್ ಕಾಲೇಜು ಸ್ಥಳಾಂತರಿಸಲಾಗಿದೆ. 

ಇನ್ನೂ ಹಲವು ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಇಲ್ಲ. ಇಂತಹ ಸಂದರ್ಭದಲ್ಲಿ ತಾಲೂಕಿಗೆ ಒಂದು ಮೆಡಿಕಲ್ ಕಾಲೇಜು ಹಾಕಿಕೊಂಡಿದ್ದು ಎಷ್ಟರಮಟ್ಟಿಗೆ ಸರಿ? ಈ ಕೆಲಸವನ್ನು ದೊಡ್ಡ ಸಾಧನೆ ಎಂದು ಡಿಕೆಶಿ ತಿಳಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕನಕಪುರದಲ್ಲಿ ಮೆಡಿಕಲ್ ಹಾಲೇಜು ಸ್ಥಾಪಿಸಲು ಕುಮಾರಸ್ವಾಮಿ ಸರ್ಕಾರ ಅನುಮೋದನೆ ನೀಡಿತ್ತು, ಅದಾದ ನಂತಕರ ಯಡಿಯೂರಪ್ಪ ಸಿಎಂ ಆದ ನಂತರ ಅದನ್ನು ರದ್ಧು ಗೊಳಿಸಿದ್ದರು, 2018ರ ಡಿಸೆಂಬರ್ ನಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ಇದಕ್ಕಾಗಿ  90 ಕೋಟಿ ರು ಹಣ ಬಿಡುಗಡೆ ಮಾಡಲಾಗಿತ್ತು, ಆದರೆ ಈ ಸಂಬಂಧ ಜಿದ್ದಿಗೆ ಬಿದ್ದಿರುವ ಡಿಕೆ ಶಿವಕುಮಾರ್ ಚಿಕ್ಕಬಳ್ಳಾಪುರಕ್ಕೆ ಶಿಫ್ಟ್ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ನವೆಂಬರ್ 8 ರಂದು ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಬಿಜೆಪಿ ಸರ್ಕಾರ ನಿರ್ಧರಿಸಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com