ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಆಪರೇಷನ್ ಕಮಲಕ್ಕೆ ಸಾಕ್ಷ್ಯ: ಅಮಿತ್ ಶಾ, ಯಡಿಯೂರಪ್ಪ  ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು- ಸಿದ್ದು

ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ನಡೆಸಿದ್ದ ಆಪರೇಷನ್ ಕಮಲಕ್ಕೆ ಸಾಕ್ಷ್ಯ ಒದಗಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ದೇಶನದಲ್ಲಿಯೇ ಇದು ನಡೆದಿತ್ತು ಎಂಬ ಸತ್ಯವನ್ನು ವಿಡಿಯೋದಲ್ಲಿ ಹೇಳಿದ್ದು, ಕೂಡಲೇ ಇಬ್ಬರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕಾಂಗ್ರೆಸ್  ಪಕ್ಷದ ಶಾಸಕರಿಗೆ ಆಮಿಷಗಳನ್ನು ಒಡ್ಡಿ ಮುಂಬೈನ ಹೊಟೇಲ್‌ನಲ್ಲಿಟ್ಟು ಸರ್ಕಾರದ ಪತನಕ್ಕೆ ನೇರ ಕಾರಣರಾಗಿರುವ 
ಅಮಿತ್ ಶಾ, ಆಪರೇಷನ್ ಕಮಲ ಎಂಬ ಅಸಂವಿಧಾನಿಕ ಕಾರ್ಯಾಚರಣೆಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದಿದ್ದಾರೆ.

ಆಪರೇಷನ್ ಕಮಲದ ಹೆಸರಿನಲ್ಲಿ ಸಂವಿಧಾನದ ಕಗ್ಗೊಲೆಯಾಗುತ್ತಿದೆ.ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ನೇರವಾಗಿ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಪುರಾವೆ ಸಿಕ್ಕಿದೆ. ಆದ ಕಾರಣ ಇದನ್ನು ಇಲ್ಲಿಗೆ ಕೈಬಿಡುವ ಪ್ರಶ್ನೆಯೇ ಇಲ್ಲ. ಇದನ್ನು ಸುಪ್ರೀಮ್ ಕೋರ್ಟ್‌ನ ಗಮನಕ್ಕೆ ತಂದು ನ್ಯಾಯ ಕೇಳ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಪಾಲರನ್ನು ಭೇಟಿ ಮಾಡಿ, ಯಡಿಯೂರಪ್ಪ ನವರ ರಾಜೀನಾಮೆ ಪಡೆಯುವಂತೆ ಮನವಿ ಪತ್ರ ನೀಡಲಿದ್ದೇವೆ. ರಾಷ್ಟ್ರಪತಿಯವರನ್ನೂ ಭೇಟಿ ಮಾಡಿ, ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ

Related Stories

No stories found.

Advertisement

X
Kannada Prabha
www.kannadaprabha.com