ನೆರೆ ಸಂತ್ರಸ್ಥರಿಗೆ ನೆರವಾದವರಿಗೆ ನಮ್ಮ ಬೆಂಬಲ: ಬಿಎಸ್ ವೈ ಸರ್ಕಾರಕ್ಕೆ ಎಚ್ ಡಿಕೆ ಬೆಂಬಲ

ಯಡಿಯೂರಪ್ಪ ಮುಖ್ಯ ಮಂತ್ರಿಯಾದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಚರ್ಚೆ ಮಾಡಿದ್ದರು. ಆದರೆ, ಈಗ ಆಗಿದ್ದೇನು? ನೆರೆ ಸಂತ್ರಸ್ತರ ಗೋಳು ಕೇಳುವುದಕ್ಕೂ ಮುಖ್ಯಮಂತ್ರಿ ಬಳಿ ಸಮಯವಿಲ್ಲ...
ಕುಮಾರಸ್ವಾಮಿ
ಕುಮಾರಸ್ವಾಮಿ

ಬೆಂಗಳೂರು: ಯಡಿಯೂರಪ್ಪ ಮುಖ್ಯ ಮಂತ್ರಿಯಾದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಚರ್ಚೆ ಮಾಡಿದ್ದರು. ಆದರೆ, ಈಗ ಆಗಿದ್ದೇನು? ನೆರೆ ಸಂತ್ರಸ್ತರ ಗೋಳು ಕೇಳುವುದಕ್ಕೂ ಮುಖ್ಯಮಂತ್ರಿ ಬಳಿ ಸಮಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದರು.

ಇಂದು ನಗರದ ಪ್ರೆಸ್​ಕ್ಲಬ್​ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಜನ ಬಹಳ ಕಷ್ಟದಲ್ಲಿ ಇದ್ದಾರೆ. ಹೀಗಾಗಿಯೇ ಮಧ್ಯಂತರ ಚುನಾವಣೆ ಬೇಡ ಎಂದು ಹೇಳಿದ್ದೇನೆ. ಬಿಜೆಪಿ ಸರ್ಕಾರ ಪತನ ಗೊಂಡು ಮಧ್ಯಂತರ ಚುನಾವಣೆ ನಡೆದರೂ ಯಾವ ಪಕ್ಷಕ್ಕೂ ಬಹುಮತ ಬರುವುದಿಲ್ಲ. ಹೀಗಾಗಿ ಮಧ್ಯಂತರ ಚುನಾವಣೆ ತಡೆಯುವುದಕ್ಕಾಗಿ ಸರ್ಕಾರವನ್ನು ಬೆಂಬಲಿಸುವುದಾಗಿ ಹೇಳಿದ್ದೇನೆ ಎಂದರು.

ಬಿಜೆಪಿ ಸರ್ಕಾರದ ಬಗ್ಗೆ ನನಗೆ ಅನುಕಂಪ ಇಲ್ಲ ಮತ್ತು ಪ್ರೀತೀನೂ ಇಲ್ಲ. ನೆರೆಯಿಂದ ತತ್ತರಿಸಿರುವ ಜನರಿಗೆ ಸರ್ಕಾರ ನೆರವಾಗಲಿ ಎಂಬ ಕಾಳಜಿಯಿಂದ ಈ ಸರ್ಕಾರ ಮುಂದುವರೆಯಲಿ ಎಂಬ ಆಶಾಭಾವನೆ ವ್ಯಕ್ತಪಡಿಸಿದ್ದೇನೆ. ಆದರೆ ದೂರವಾಣಿ ಕದ್ದಾಲಿಕೆ, ಶಾಸಕರು ಪಕ್ಷ ತೊರೆಯುತ್ತಾರೆ ಎಂಬ ಕಾರಣಕ್ಕಾಗಿ ಸರ್ಕಾರ ಪತನವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ ಎಂಬ ವ್ಯಾಖ್ಯಾನಗಳು ಮಾಧ್ಯಮಗಳಲ್ಲಿ ಬಂದಿದೆ. ನಾನು ಹಾಗೆ ಹೇಳಿಯೇ ಇಲ್ಲ. ಜನರ ಸಂಕಷ್ಟದಲ್ಲಿರುವಾಗ ಚುನಾವಣೆ ನಡೆಸುವುದು ಬೇಡವೆಂದು ನನ್ನಅಭಿಪ್ರಾಯ ಎಂದು ಮಾಜಿ ಸಿಎಂ ಸ್ಪಷ್ಟಪಡಿಸಿದರು.

ಉಪ ಚುನಾವಣೆಯೇ ಆಗಲಿ, ಮಧ್ಯಂತರ ಚುನಾವಣೆಯೇ ಆಗಲಿ ಜೆಡಿಎಸ್ ಯಾರ ಜೊತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಏಕಾಂಗಿಯಾಗೇ ಸ್ಪರ್ಧೆ ಮಾಡುತ್ತೆ. ಮಧ್ಯಂತರ ಚುನಾವಣೆ ಬಂದರೂ ಜೆಡಿಎಸ್ ಚುನಾವಣೆಗೆ ಸಜ್ಜಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com